ಹಿರಿಯ ನಟ ದ್ವಾರಕೀಶ್ ಅವರ ಅಂತಿಮ ದರ್ಶನಕ್ಕೆ ನಾಳೆ ಬೆಳಗ್ಗೆ 7 ಗಂಟೆಯಿಂದ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ವ್ಯವಸ್ಥೆ ಮಾಡಲಾಗಿದೆ ಎಂದು ದ್ವಾರಕೀಶ್ ಕುಟುಂಬಸ್ಥರು ತಿಳಿಸಿದ್ದಾರೆ.
ನಾಳೆ ಏಳು ಗಂಟೆಯಿಂದ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ಅವಕಾಶ ಮಾಡಲಾಗಿದ್ದು, ನಂತರ ಚಾಮರಾಜಪೇಟೆಯ ಟಿಆರ್ ಮಿಲ್ ನಲ್ಲಿಅವರ ಅಂತ್ಯಕ್ರಿಯೆ ನೆರವೇರಿಸಲಾಗುತ್ತಿದೆ.
ಈ ಕುರಿತಂತೆ ಮಾತನಾಡಿದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎನ್.ಎಂ. ಸುರೇಶ್, ದ್ವಾರಕೀಶ್ ಚಿತ್ರರಂಗದ ದೊಡ್ಡ ಆಸ್ತಿ. ಅವರ ಅಗಲಿಕೆ ಎಲ್ಲರಿಗೂ ತುಂಬಾ ನೋವಾಗಿದೆ. ಅವರು ಕೇವಲ ನಟರಲ್ಲ ನಿರ್ದೇಶಕ, ನಿರ್ಮಾಪಕ ಕೂಡ ಹೌದು. ಹಾಗಾಗಿ ನಾಳೆ ಚಿತ್ರರಂಗ ಬಂದ್ ಮಾಡುವ ಬಗ್ಗೆ ಚರ್ಚೆ ನಡೆಯುತ್ತಿದೆ. ನಾಳೆ ಸ್ವಯಂಪ್ರೇರಿತವಾಗಿ ಬಂದ್ ಮಾಡಬೇಕು ಅಂತ ಕೇಳಿಕೊಳ್ತೀನಿ ಎಂದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA