ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ನಟ ಮನ್ಸೂರ್ ಅಲಿ ಖಾನ್ ಪ್ರಚಾರದ ವೇಳೆ ಕುಸಿದು ಬಿದ್ದಿದ್ದಾರೆ. ವೆಲ್ಲೂರಿನಿಂದ ಮನ್ಸೂರ್ ಅಲಿ ಖಾನ್ ಸ್ಪರ್ಧಿಸಲಿದ್ದಾರೆ. ವೆಲ್ಲೂರಿನ ಒಳ ಗ್ರಾಮಗಳಲ್ಲಿ ಪ್ರಚಾರ ನಡೆಸುತ್ತಿದ್ದ ವೇಳೆ ಎದೆನೋವು ಕಾಣಿಸಿಕೊಂಡು ಕುಸಿದು ಬಿದ್ದಿದ್ದಾರೆ.
ಸದ್ಯ ಚೆನ್ನೈನ ಕೆ.ಕೆ. ನಗರದ ಆಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗದಲ್ಲಿ ಮನ್ಸೂರ್ ಅಲಿಖಾನ್ ಅವರಿಗೆ ಚಿಕಿತ್ಸೆ ನಡೆಸುತ್ತಿದ್ದಾರೆ. ಪ್ರಚಾರ ಮಾಡುತ್ತಿದ್ದ ವೇಳೆ ಮನ್ಸೂರ್ ಅಲಿಖಾನ್ ಮಾಂಸ ಕಡಿದು, ತರಕಾರಿ ಮಾರಾಟ ಮಾಡಿ ವಿಭಿನ್ನವಾಗಿ ಮತಯಾಚನೆ ಮಾಡುತ್ತಿದ್ದರು.

ಇತ್ತೀಚೆಗೆ, ನಟ ಡೆಮಾಕ್ರಟಿಕ್ ಟೈಗರ್ಸ್ ಆಫ್ ಇಂಡಿಯಾ ಎಂಬ ಹೊಸ ಪಕ್ಷವನ್ನು ಪ್ರಾರಂಭಿಸಿದರು. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸೋತಿದ್ದ ಮನ್ಸೂರ್ ಈ ಬಾರಿ ಅಣ್ಣಾ ಡಿಎಂಕೆ ಜತೆ ಸ್ಪರ್ಧಿಸಲು ಮುಂದಾದರು. ಆದರೆ ವಿಫಲರಾದರು.
ಬಳಿಕ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆಗೆ ಇಳಿದಿದ್ದರು. ಮನ್ಸೂರ್ ಅಲಿ ಖಾನ್ ವೆಲ್ಲೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ಏಪ್ರಿಲ್ 19 ರಂದು ತಮಿಳುನಾಡಿನಲ್ಲಿ ಲೋಕಸಭೆ ಚುನಾವಣೆ ನಡೆಯಲಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


