ಬೆಂಗಳೂರು: ಬಿಗ್ ಬಾಸ್ ಮಾಜಿ ಸ್ಪರ್ಧಿ, ನಟ ರಜತ್ ಕಿಶನ್ ಅವರನ್ನು ಕೊಲೆ ಮಾಡುವುದಾಗಿ ಪತ್ನಿ ಅಕ್ಷಿತಾಗೆ ಕೊಲೆ ಬೆದರಿಕೆ ಸಂದೇಶ ಬಂದ ಹಿನ್ನೆಲೆ ರಜತ್ ಡಿಜಿಐಜಿಪಿಗೆ ದೂರು ನೀಡಿದ್ದಾರೆ.
ಧರ್ಮಸ್ಥಳದಲ್ಲಿ ಯೂಟ್ಯೂಬರ್ಸ್ ಮೇಲೆ ಹಲ್ಲೆ ನಡೆದ ವೇಳೆ ರಜತ್ ಕಿಶನ್ ಸ್ಥಳದಲ್ಲಿದ್ದರು. ಈ ಹಿನ್ನೆಲೆ ರಜತ್ ಪತ್ನಿ ಅಕ್ಷಿತಾಗೆ ಕೆಲವು ಕಿಡಿಗೇಡಿಗಳು ಕೊಲೆ ಬೆದರಿಕೆ ಸಂದೇಶ ಕಳುಹಿಸಿದ್ದಾರೆನ್ನಲಾಗಿದೆ.
ಈ ಸಂಬಂಧ ದೂರು ನೀಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ರಜತ್, ನನ್ನ ಪತ್ನಿ ಅಕ್ಷಿತಾಗೆ, ಕೊಲೆ ಮಾಡ್ತೀವಿ ಅಂಥ ಬೆದರಿಕೆ ಸಂದೇಶ ಬಂದಿತ್ತು. ಇದು ಬಹಳ ಕೆಟ್ಟದ್ದು. ನಾವು ಯಾವುದೇ ಜಾತಿ, ಧರ್ಮ ಜಾಗ ದೇವಸ್ಥಾನ ಬಗ್ಗೆ ಮಾತಾಡಿಲ್ಲ. ನಾವು ಹೋಗಿದ್ದು ಸೌಜನ್ಯ ಪರ ನ್ಯಾಯಕ್ಕಾಗಿ. ಕತ್ತರಿಸ್ತೀನಿ ಅಂದ್ರೆ ಹೇಗೆ ಎಂದು ಪ್ರಶ್ನಿಸಿದರು.
ಹಾಡಹಗಲೇ ನಮ್ಮ ಕಣ್ಣಮುಂದೆನೇ ಎಲ್ಲ ನಡೆದಿದ್ದು. ಹಲ್ಲೆ ಮಾಡಿದವರ ಮೇಲೆ ದೂರು ಕೊಟ್ಟಿದ್ದೇನೆ. ನನ್ನ ಪತ್ನಿಗೆ ಬೆದರಿಕೆ ಸಂದೇಶ ಹಾಕಿದವರ ವಿರುದ್ಧವೂ ದೂರು ಕೊಟ್ಟಿದ್ದೇವೆ. ನಾವು ಕೊಟ್ಟ ದೂರು ಸೈಬರ್ ಠಾಣೆಗೆ ವರ್ಗಾವಣೆ ಆಗಿದೆ. ಕರಾವಳಿ, ಮಂಡ್ಯ ಅಂತೆಲ್ಲ ಹೇಳುತ್ತಿದ್ದಾರೆ. ನಾವು ಮಂಡ್ಯದವರನ್ನ ಕರ್ಕೊಂಡು ಬರುತ್ತೇವೆ ಎಂದು ಹೇಳಿಲ್ಲ. ಬೆದರಿಕೆಗಳಿಗೆ ನಾವು ಹೆದರಲ್ಲ ಎಂದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC