ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಎಸ್.ಶಿವರಾಮ್ ಅವರು ಇಂದು ನಿಧನರಾಗಿದ್ದು, ತಮ್ಮ ಮನೆಯಲ್ಲಿ ಬಿದ್ದು, ತಲೆಗೆ ತೀವ್ರವಾಗಿ ಪೆಟ್ಟು ಬಿದ್ದಿದ್ದ ಹಿನ್ನೆಲೆಯಲ್ಲಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಸದೇ ನಿಧನರಾಗಿದ್ದಾರೆ.
84 ವರ್ಷ ವಯಸ್ಸಿನ ಶಿವರಾಮ್ ಅವರು ಕಿರುತೆರೆ ಹಾಗೂ ಹಿರಿತೆರೆಯ ಹಲವಾರು ಚಿತ್ರಗಳು ಹಾಗೂ ಧಾರಾವಾಹಿಗಳಲ್ಲಿ ನಟಿಸಿದ್ದರು. 1938ರಲ್ಲಿ ಚೂಡಸಂದ್ರ ಹಳ್ಳಿಯಲ್ಲಿ ಜನಿಸಿದ್ದ ಶಿವರಾಮ್ ಅವರು, ಶಿವರಾಮಣ್ಣ ಎಂದೇ ಚಿತ್ರರಂಗದಲ್ಲಿ ಪರಿಚಿತರಾಗಿದ್ದರು.
ಪೋಷಕ ನಟನಾಗಿ, ಹಾಸ್ಯನಟನಾಗಿ ನಟಿಸಿದ್ದ ಇವರು ನಿರ್ದೇಶಕರಾಗಿ, ನಿರ್ಮಾಪಕರೂ ಆಗಿ ಕನ್ನಡ ಚಿತ್ರರಂಗದಲ್ಲಿ ಸೇವೆ ಸಲ್ಲಿಸಿದವರಾಗಿದ್ದಾರೆ. ತಮ್ಮ ಸಹೋದರ ರಾಮನಾಥನ್ ಅವರ ಜೊತೆಗೆ ಸೇರಿ ‘ರಾಶಿ ಬ್ರದರ್ಸ್’ ಸಿನಿಮಾ ಸಂಸ್ಥೆಯನ್ನು ಆರಂಭಿಸಿ ಹಲವು ಚಿತ್ರಗಳನ್ನು ನಿರ್ಮಿಸಿದ್ದರು.
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700