ಮುಂಬೈ: ಬಾಲಿವುಡ್ ನಟ ಸೈಫ್ ಅಲಿಖಾನ್ ಗೆ ದುಷ್ಕರ್ಮಿಗಳು ಚಾಕುವಿನಿಂದ ಹಲವು ಬಾರಿ ಇರಿದು ಪರಾರಿಯಾದ ಘಟನೆ ನಡೆದಿದ್ದು, ಸದ್ಯ ಗಂಭೀರ ಸ್ಥಿತಿಯಲ್ಲಿರುವ ನಟನನ್ನು ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಧ್ಯರಾತ್ರಿ 2.30ರ ಸುಮಾರಿಗೆ ಮುಂಬೈನ ಪಶ್ಚಿಮ ಬಾಂದ್ರಾದಲ್ಲಿರುವ ಅವರ ನಿವಾಸಕ್ಕೆ ಕಳ್ಳತನಕ್ಕೆ ಬಂದಿದ್ದ ದುಷ್ಕರ್ಮಿ, ಮನೆಯವರು ಎಚ್ಚರಗೊಂಡಿರುವುದು ತಿಳಿದು ಪರಾರಿಯಾಗಲು ಯತ್ನಿಸಿದ್ದಾನೆ. ತಡೆಯಲು ಯತ್ನಿಸಿದ ವೇಳೆ ಚೂರಿಯಿಂದ ಇರಿಯಲಾಗಿದೆ.
ಹಲ್ಲೆಗೊಳಗಾಗಿದ್ದ ಸೈಫ್ ಅಲಿ ಖಾನ್ ಅವರನ್ನು ಮುಂಜಾನೆ 3.30ಕ್ಕೆ ಆಸ್ಪತ್ರೆಗೆ ಕರೆತರಲಾಯಿತು. ಸೈಫ್ ಅವರಿಗೆ 2 ಕಡೆ ಚಾಕುವಿನಿಂದ ಆಳವಾಗಿ ಇರಿಯಲಾಗಿದೆ. ಬೆನ್ನುಮೂಳೆ ಸೇರಿದಂತೆ ಆರು ಭಾಗಗಳಲ್ಲಿ ಗಾಯಗಳಾಗಿವೆ. ಸದ್ಯ ಚಿಕಿತ್ಸೆ ಮುಂದುವರಿದಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx