ಚಾಮರಾಜನಗರ: ಚಾಮರಾಜನಗರದ ಶಿವನಸಮುದ್ರಕ್ಕೆ ನಟ ಶಿವರಾಜ್ ಕುಮಾರ್ ಹಾಗೂ ಪತ್ನಿ ಗೀತಾ ಭೇಟಿ ನೀಡಿ, ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
ಕಾವೇರಿ ನದಿಗೆ ಬಾಗಿನ ಅರ್ಪಿಸಿ, ಗಣಪತಿ ದೇವಸ್ಥಾನ, ಮಧ್ಯರಂಗ ಹಾಗೂ ಮೀನಾಕ್ಷಿ ಸಮೇತ ಸೋಮೇಶ್ವರ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
ಬಳಿಕ ಶ್ರೀಚಕ್ರ ದರ್ಶನ ಪಡೆದು ಆದಿಶಕ್ತಿ ಮಾರಮ್ಮ ದೇವಸ್ಥಾನಕ್ಕೆ ಸೂಈರೆ ಸಮರ್ಪಿಸಿದರು. ಕೆಲ ದಿನಗಳ ಹಿಂದೆ ಶಿವಣ್ಣ ದಂಪತಿ ತಿರುಪತಿ ತಿಮ್ಮಪ್ಪನ ದರ್ಶನ ಪಡೆದು ಮುಡಿ ಕೊಟ್ಟಿದ್ದರು. ಇದೀಗ ಶಿವನಸಮುದ್ರಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಶಿವರಾಜ್ ಕುಮಾರ್ ಶೀಘ್ರದಲ್ಲಿ ಚಿಕಿತ್ಸೆಗಾಗಿ ಅಮೆರಿಕಾಗೆ ತೆರಳುತ್ತಿದ್ದು, ಅದಕ್ಕೂ ಮುನ್ನ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸುತ್ತಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx