ಬೆಂಗಳೂರು: ಶಸ್ತ್ರ ಚಿಕಿತ್ಸೆ ಬಳಿಕ ವಿಶ್ರಾಂತಿಯಲ್ಲಿರುವ ನಟ ಶಿವರಾಜ್ ಕುಮಾರ್ ಅವರು ಅಮೆರಿಕದಿಂದ ಜನವರಿ 26ಕ್ಕೆ ವಾಪಸ್ ಆಗಲಿದ್ದಾರೆ ಎಂದು ಶಿವರಾಜ್ ಕುಮಾರ್ ತಿಳಿಸಿದ್ದಾರೆ.
ವಿಡಿಯೋ ಮೂಲಕ ಫ್ಯಾನ್ಸ್ ಗೆ ಮಾಹಿತಿ ನೀಡಿರುವ ಶಿವರಾಜ್ ಕುಮಾರ್ ಅವರು, ನಿಮ್ಮೆಲ್ಲರನ್ನೂ ನೋಡುವುದಕ್ಕೆ ನಾನು ಜ.26 ರ ಗಣರಾಜ್ಯೋತ್ಸವದಂದು ಬೆಂಗಳೂರಿಗೆ ಬರುತ್ತಿದ್ದೇನೆ ಎಂದು ತಿಳಿಸಿದ್ದಾರೆ.
ಯುಎಸ್ ನ ಮಿಯಾಮಿ ಕ್ಯಾನ್ಸರ್ ಇನ್ ಸ್ಟಿಟ್ಯೂಟ್ನಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಶಿವರಾಜ್ ಕುಮಾರ್ ಅವರು ಬಳಿಕ ಕೆಲವು ದಿನಗಳ ಕಾಲ ಅಲ್ಲೇ ಉಳಿದು ವಿಶ್ರಾಂತಿ ಪಡೆಯುತ್ತಿದ್ದರು. ಇದೀಗ ಬೆಂಗಳೂರಿಗೆ ಆಗಮಿಸಲು ಸಿದ್ಧತೆ ನಡೆಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx