ಮುಗಿಲ್ ಪೇಟೆ ಸಿನಿಮಾ ಖ್ಯಾತಿಯ ನಿರ್ದೇಶಕ ಭರತ್ ಮೇಲೆ ನಟ ತಾಂಡವ್ ರಾಮ್ ಗುಂಡು ಹಾರಿಸಿ ಹತ್ಯೆಗೆ ಯತ್ನಿಸಿರುವ ಘಟನೆ ಬೆಂಗಳೂರಿನ ಚಂದ್ರಾ ಲೇಔಟ್ ನಲ್ಲಿ ನಡೆದಿದೆ.
ಭರತ್ ನಿರ್ದೇಶನ ಮಾಡುತ್ತಿದ್ದ ಸಿನಿಮಾವನ್ನು ಅರ್ಧಕ್ಕೆ ನಿಲ್ಲಿಸಿದ ಕಾರಣ ಆಕ್ರೋಶಗೊಂಡು ತಾಂಡವ್ ಈ ಕೃತ್ಯ ಎಸಗಿರುವುದಾಗಿ ಹೇಳಲಾಗಿದೆ.
ನಿರ್ದೇಶಕ ಭರತ್, ಸಿನಿಮಾ ಒಂದನ್ನು ನಿರ್ದೇಶಿಸುತ್ತಿದ್ದು, ಸಿನಿಮಾದಲ್ಲಿ ತಾಂಡವ್ ರಾಮ್ ನಟಿಸುತ್ತಿದ್ದರು.
ಆದರೆ ಆ ಸಿನಿಮಾವನ್ನು ಭರತ್ ನಿಲ್ಲಿಸಿದ್ದರು. ಇದರಿಂದ ಕೋಪಗೊಂಡಿದ್ದ ತಾಂಡವ್ ರಾಮ್, ನಿರ್ದೇಶಕ ಭರತ್ ಗೆ ಬಂದೂಕು ತೋರಿಸಿ ಬೆದರಿಕೆ ಹಾಕಿದ್ದಾರೆ. ಜೊತೆಗೆ ಒಂದು ಸುತ್ತು ಗುಂಡು ಹಾರಿಸಿ ಕೊಲ್ಲುವ ಯತ್ನ ಮಾಡಿದ್ದಾರೆ. ಭರತ್ ಪೊಲೀಸರಿಗೆ ಈ ಬಗ್ಗೆ ದೂರು ನೀಡಿದ್ದು, ಆರೋಪಿ ತಾಂಡವ್ ರಾಮ್ ಅನ್ನು ಬಂಧಿಸಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


