ಬಾಲಿವುಡ್ ನಟಿ ಹಾಗೂ ಮಾಡೆಲ್ ಪೂನಂ ಪಾಂಡೆ ಶುಕ್ರವಾರ ಮುಂಜಾನೆ ಮೃತಪಟ್ಟಿದ್ದಾರೆ ಎಂದು ವರದಿ ಆಗಿದೆ.
ಕ್ಯಾನ್ಸರ್ ನಿಂದ ಬಳಲುತ್ತಿದ್ದ ಪೂನಂ ಮೃತಪಟ್ಟಿರುವುದಾಗಿ ಅವರ ಇನ್ಸ್ಟಾಗ್ರಾಮ್ ಖಾತೆ ಮೂಲಕ ಪೋಸ್ಟ್ ಮಾಡಲಾಗಿದೆ. ಅವರಿಗೆ ಕ್ಯಾನ್ಸರ್ ಇರೋದು ಈವರೆಗೆ ಯಾರಿಗೂ ತಿಳಿದಿರಲಿಲ್ಲ. ಹೀಗಾಗಿ ಅಭಿಮಾನಿಗಳಿಗೆ ದೊಡ್ಡ ಶಾಕ್ ಎದುರಾಗಿದೆ.
ಉತ್ತರ ಪ್ರದೇಶದಲ್ಲಿರುವ ಅವರ ನಿವಾಸದಲ್ಲಿ ಪೂನಂ ಮೃತಪಟ್ಟಿದ್ದಾರೆ. ಅವರಿಗೆ ಕೇವಲ 32 ವರ್ಷ ವಯಸ್ಸಾಗಿತ್ತು.
ಪೂನಂ ಪಾಂಡೆ ಅವರು ಇನ್ ಸ್ಟಾಗ್ರಾಮ್ ನಲ್ಲಿ ಪೋಸ್ಟ್ ನಲ್ಲಿ ಪೂನಂ ಪಾಂಡೆ ಮೃತಪಟ್ಟಿರುವುದನ್ನು ದೃಢಪಡಿಸಲಾಗಿದೆ.


