ಸ್ಯಾಂಡಲ್ ವುಡ್ ನಟಿ ಹರ್ಷಿಕಾ ಪೂಣಚ್ಚ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಈ ಬಗ್ಗೆ ಅವರ ಪತಿ ಭುವನ್ ಪೊನ್ನಣ್ಣ ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ಬೆಳಗ್ಗಿನ ಜಾವ 3 ಗಂಟೆಗೆ ಹರ್ಷಿಕಾ ಪೂಣಚ್ಚ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ಹರ್ಷಿಕಾ ಹಾಗೂ ಭುವನ್ ಪೊನ್ನಣ್ಣ ಕುಟುಂಬಕ್ಕೆ ಮತ್ತೊಬ್ಬ ಸದಸ್ಯೆ ಸೇರ್ಪಡೆಯಾಗಿದ್ದು, ಈ ಸಂತಸದ ಕ್ಷಣಗಳನ್ನು ಕುಟುಂಬ ಸಂಭ್ರಮಿಸಿದೆ.
ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಹರ್ಷಿಕಾ ಜನ್ಮ ನೀಡಿದ್ದಾರೆ. ಈ ಬಗ್ಗೆ ಭುವನ್ ಪೊನ್ನಣ್ಣ ಸಾಮಾಜಿಕ ಜಾಲತಾಣದಲ್ಲಿ ಬರೆದು ಕೊಂಡಿದ್ದು, ಎಲ್ಲರಿಗೂ ನಮಸ್ಕಾರ, ನಮ್ಮ “ಚೈಕಾರ್ತಿ ಮೂಡಿ” ಜನಿಸಿದ್ದನ್ನು ತಿಳಿಸಲು ಸಂತೋಷ ಪಡುತ್ತಿದ್ದೇವೆ. ಹರ್ಷಿ ಮತ್ತು ಮಗಳು ಆರೋಗ್ಯವಾಗಿದ್ದಾರೆ. ನನ್ನ ಪ್ರಕಾರ ಮಗಳು ಹರ್ಷಿಕಾಳಂತೆ ಇದ್ದರೆ ಅವಳ ಪ್ರಕಾರ ಮಗು ನನ್ನ ಕಾಪಿ ಎನ್ನುತ್ತಿದ್ದಾಳೆ.ಎಲ್ಲರಿಗೂ ಧನ್ಯವಾದ ಎಂದು ಬರೆದುಕೊಂಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q