ನವದೆಹಲಿ: ಇಸ್ರೇಲ್ ನಲ್ಲಿ ಸಿಲುಕಿಕೊಂಡಿದ್ದ ಬಾಲಿವುಡ್ ನಟಿ ನುಶ್ರತ್ ಭರುಚ್ಚಾ ಸುರಕ್ಷಿತವಾಗಿ ಭಾರತಕ್ಕೆ ಮರಳಲು ವಿಮಾನ ಹತ್ತಿದ್ದಾರೆ. ಬಾಲಿವುಡ್ ನಟಿ ನುಶ್ರತ್ ಭರುಚ್ಚಾ ಅವರು ಇಸ್ರೇಲ್ ನಲ್ಲಿ ಸಿಲುಕಿಕೊಂಡಿದ್ದರ ಬಗ್ಗೆ ನಟಿಯ ಸದಸ್ಯರ ತಿಳಿಸಿದ್ಗರು.
ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಭಾಗಿಯಾಗಲು ನಟಿ ನುಶ್ರತ್ ಹೈಫಾ ಇಸ್ರೇಲ್ ತೆರಳಿದ್ದರು ಎನ್ನಲಾಗಿದೆ.
ಆ ವೇಳೆ ಇಸ್ರೇಲ್ ನಲ್ಲಿ ನುಶ್ರತ್ ಸಿಲುಕಿಕೊಂಡಿದ್ದರು. ಆ ಬಳಿಕ ಸಂಪರ್ಕ ಸಾಧ್ಯವಾಗಿಲ್ಲ ಎಂದು ಕುಟುಂಬದ ಸದಸ್ಯರು ಹೇಳಿದ್ದಾರೆ. “ನಾವು ನುಶ್ರತ್ ಅವರನ್ನು ಸುರಕ್ಷಿತವಾಗಿ ಭಾರತಕ್ಕೆ ಕರೆತರುವ ಪ್ರಯತ್ನ ಮಾಡುತ್ತಿದ್ದೇವೆ. ಯಾವುದೇ ಅಪಾಯಕ್ಕೆ ಸಿಲುಕದೆ ಅವರು ಹಿಂತಿರುಗುತ್ತಾರೆ ಎಂದು ಭಾವಿಸುತ್ತೇವೆ” ಎಂದು ನಟಿಯ ತಂಡದ ಸದಸ್ಯ ಹೇಳಿದ್ದರು.
ಇದೀಗ ನಟಿ ನುಶ್ರತ್ ಭರುಚ್ಚ ಅವರ ಸಂಪರ್ಕಿಸಿದ್ದು, ನಟಿ ಇಸ್ರೇಲ್ ವಿಮಾನ ನಿಲ್ದಾಣವನ್ನು ತಲುಪಿದ್ದಾರೆ ಎಂದು ತಿಳಿದುಬಂದಿದೆ. ಅವರು ಶೀಘ್ರದಲ್ಲೇ ಭಾರತಕ್ಕೆ ಮರಳಲಿದ್ದಾರೆ ಎಂದು ತಿಳಿಸಿದ್ದಾರೆ.


