ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ, ಕೊಲೆ ಆರೋಪ ಪ್ರಕರಣಗಳನ್ನು ಪ್ರಸ್ತಾಪಿಸಿ ನಟ ದರ್ಶನ್, ಪ್ರಜ್ವಲ್ ರೇವಣ್ಣ, ಬಿಜೆಪಿ ಹಿರಿಯ ನಾಯಕ ಬಿ.ಎಸ್.ಯಡಿಯೂರಪ್ಪ, ಸೂರಜ್ ರೇವಣ್ಣ ವಿರುದ್ದ ನಟಿ ರಮ್ಯಾ ಹರಿ ಹಾಯ್ದಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣವಾದ ಎಕ್ಸ್ ನಲ್ಲಿ ವಿವರವಾಗಿ ಬರೆದುಕೊಂಡಿದ್ದಾರೆ.ಇತ್ತೀಚೆಗೆ ಬೆಳಕಿಗೆ ಬಂದ ಹೆಚ್ಚಿನ ಪ್ರಕರಣಗಳಲ್ಲಿ ಶ್ರೀಮಂತರು, ಶಕ್ತಿಶಾಲಿಗಳು ಕಾನೂನು ಉಲ್ಲಂಘಿಸಿ ಕೃತ್ಯವೆಸಗಿದ್ದಾರೆ. ಇವರಿಂದಾಗಿ ಬಡವರು, ಮಹಿಳೆಯರು ಮತ್ತು ಮಕ್ಕಳ ಭವಿಷ್ಯ ಮಂಕಾಗುತ್ತಿದೆ. ಈ ಅಪರಾಧ ಕೃತ್ಯಗಳನ್ನು ಬೆಳಕಿಗೆ ತಂದ ಪೊಲೀಸರು ಮತ್ತು ಮಾಧ್ಯಮಗಳಿಗೆ ಅಭಿನಂದನೆಗಳು. ಈ ಎಲ್ಲಾ ಅಪರಾಧ ಕೃತ್ಯಗಳು ಶೀಘ್ರ ವಿಚಾರಣೆಯಾಗಿ ಪ್ರಕರಣ ತಾರ್ಕಿಕ ಅಂತ್ಯ ಕಂಡಾಗ ಮಾತ್ರ ನ್ಯಾ ಗೆಲ್ಲುತ್ತದೆ. ನ್ಯಾಯವು ಮೇಲುಗೈ ಸಾಧಿಸದಿದ್ದರೆ, ನಾವು ಸಾರ್ವಜನಿಕರಿಗೆ ಯಾವ ಸಂದೇಶ ನೀಡುತ್ತೇವೆ?’ ಎಂದು ಪೋಸ್ಟ್ ಮಾಡಿದ್ದಾರೆ.
ಮಹಿಳೆಯರು ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ನ್ಯಾಯಾಂಗ ಬಂಧನದಲ್ಲಿದ್ದಾರೆ. ಬಾಲಕಿಗೆ ಲೈಂಗಿಕ ದೌರ್ಜನ್ಯ ನೀಡಿದ ಆರೋಪದ ಮೇಲೆ ಬಿಜೆಪಿಯ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧ ಪೋಕ್ಸೊ ಪ್ರಕರಣ ದಾಖಲಾಗಿದೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ದರ್ಶನ್ ಪೊಲೀಸ್ ಕಸ್ಟಡಿಯಲ್ಲಿದ್ದಾರೆ. ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ವಿರುದ್ಧವೂ ಲೈಂಗಿಕ ದೌರ್ಜನ್ಯ ಆರೋಪ ಕೇಳಿ ಬಂದಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


