ಬೆಂಗಳೂರು: ನಟಿ ರನ್ಯಾ ರಾವ್ ಈ ಹಿಂದೆ ಸುಮಾರು 14.56 ಕೆಜಿ ಚಿನ್ನವನ್ನು ಕಳ್ಳಸಾಗಣೆ ಮಾಡಿರುವುದನ್ನು ಗುಪ್ತಚರ ಇಲಾಖೆ ಪತ್ತೆ ಹಚ್ಚಿದೆ.
ದುಬೈಯಿಂದ ಕಳ್ಳಸಾಗಣೆ ಮಾಡಿದ ಚಿನ್ನವನ್ನು ಸಾಹಿಲ್ ಸಕಾರಿಯಾ ಜೈನ್ ಅವರ ಸಹಾಯದಿಂದ ರನ್ಯಾ ರಾವ್ ಭಾರತದಲ್ಲಿ ಮಾರಾಟ ಮಾಡಲು ಸಹಾಯ ಮಾಡುತ್ತಿದ್ದರು. ಇದರಿಂದಾಗಿ ಸರ್ಕಾರದ ಬೊಕ್ಕಸಕ್ಕೆ 4.45 ಕೋಟಿ ರೂಪಾಯಿ ಸುಂಕ ನಷ್ಟವಾಗಿದೆ ಎಂದು ಕೇಂದ್ರ ತನಿಖಾ ಸಂಸ್ಥೆ ಹೇಳಿಕೊಂಡಿದೆ.
ಈ ವರ್ಷದ ಆರಂಭದಲ್ಲಿ ಜನವರಿ 11 ರಂದು ರನ್ಯಾ ಭಾರತಕ್ಕೆ ಚಿನ್ನವನ್ನು ಕಳ್ಳಸಾಗಣೆ ಮಾಡಿದ್ದರು. ಜನವರಿ 11 ರಂದು ಅವರು ಸುಮಾರು 14.56 ಕೆಜಿ ತೂಕದ, 11.55 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಚಿನ್ನವನ್ನು ಕಳ್ಳಸಾಗಣೆ ಮಾಡಿದ್ದರು. ಸಾಹಿಲ್ ಜೈನ್ ಅವರು ಅದನ್ನು ಮಾರಾಟ ಮಾಡಲು ಸಹಾಯ ಮಾಡಿದ್ದರು. ಇದರಿಂದಾಗಿ 4.46 ಕೋಟಿ ರೂಪಾಯಿ ಸರ್ಕಾರಕ್ಕೆ ಕಸ್ಟಮ್ಸ್ ಸುಂಕ ನಷ್ಟವಾಗಿತ್ತು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4