ಬೆಂಗಳೂರು: ಗೋಲ್ಡ್ ಸ್ಮಗ್ಲಿಂಗ್ ಕೇಸ್ ನಲ್ಲಿ ಜೈಲು ಪಾಲಾಗಿರುವ ನಟಿ ರನ್ಯಾ ರಾವ್ ಜಾಮೀನು ಅರ್ಜಿ ವಿಚಾರಣೆ ಅಂತ್ಯವಾಗಿದ್ದು, ಬೆಂಗಳೂರಿನ 64ನೇ ಸಿಸಿಹೆಚ್ ಕೋರ್ಟ್ ಜಾಮೀನು ಆದೇಶವನ್ನು ಕಾಯ್ದಿರಿಸಿದೆ.
ಡಿಆರ್ ಐ ಪರ ವಕೀಲ ಮಧು ರಾವ್ ಅವರು ವಾದ ಮಂಡನೆ ಮಾಡಿದ್ದಾರೆ. ರನ್ಯಾ ರಾವ್ ಪರ ಹಿರಿಯ ವಕೀಲ ಕಿರಣ್ ಜವಳಿ ಪ್ರತಿವಾದ ಮಾಡಿದ್ದಾರೆ. ಎರಡೂ ಕಡೆಯ ವಾದವನ್ನು ಕೋರ್ಟ್ ಆಲಿಸಿತು.
ಮಾರ್ಚ್ 27ರಂದು ರನ್ಯಾ ಅವರ ಜಾಮೀನು ಬಗ್ಗೆ ಆದೇಶ ಪ್ರಕಟವಾಗಲಿದ್ದು, ಜಾಮೀನು ಸಿಗುತ್ತದೆಯೇ ಅಥವಾ ನಟಿಗೆ ಜೈಲೇ ಗತಿಯೇ ಎನ್ನುವುದನ್ನು ಕಾದು ನೋಡಬೇಕಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4