ಬಾಲಿವುಡ್ ಖ್ಯಾತ ನಟಿ ಶಿಲ್ಪಾ ಶೆಟ್ಟಿ ಸಹೋದರಿ ಶಮಿತಾ ಶೆಟ್ಟಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ನಟಿ ಶಮಿತಾ ಶೆಟ್ಟಿ ಅವರು ತಮ್ಮ ಇನ್ ಸ್ಟಾಗ್ರಾಮ್ ಖಾತೆಯಲ್ಲಿ ವೀಡಿಯೋವೊಂದನ್ನು ಶೇರ್ ಮಾಡಿಕೊಂಡಿದ್ದಾರೆ. ಶೇರ್ ಮಾಡಿಕೊಂಡ ವೀಡಿಯೋದಲ್ಲಿ ನಟಿ ಶಮಿತಾ ಶೆಟ್ಟಿ ಅವರು ಎಂಡೊಮೆಟ್ರಿಯೊಸಿಸ್ ಸಮಸ್ಯೆಯಿಂದ ಬಳಲುತ್ತಿದ್ದಾರಂತೆ.
ಅದಕ್ಕಾಗಿ ಸೂಕ್ತವಾದ ಚಿಕಿತ್ಸೆ ಕೂಡ ಪಡೆಯುತ್ತಿದ್ದಾರೆ. ಎಲ್ಲಾ ಮಹಿಳೆಯರಿಗೂ ಈ ಬಗ್ಗೆ ಜಾಗೃತರಾಗಿ ಮತ್ತು ಪರೀಕ್ಷೆ ಮಾಡಿಸಿಕೊಳ್ಳಿ ಅಂತ ಸಲಹೆ ನೀಡಿದ್ದಾರೆ. ಆಸ್ಪತ್ರೆಯ ಹಾಸಿಗೆಯಲ್ಲಿ ಕುಳಿತು ವೀಡಿಯೊ ಶೇರ್ ಮಾಡಿಕೊಂಡಿದ್ದಾರೆ. ಶಮಿತಾ ಮಾತನಾಡಿ ಮಹಿಳೆಯರೇ, ದಯವಿಟ್ಟು ಎಂಡೊಮೆಟ್ರಿಯೊಸಿಸ್ ಬಗ್ಗೆ ಸುಮಾರು 40% ಮಹಿಳೆಯರು ಎಂಡೊಮೆಟ್ರಿಯೊಸಿಸ್ ನಿಂದ ಬಳಲುತ್ತಿದ್ದಾರೆ. ನಮ್ಮಲ್ಲಿ ಹೆಚ್ಚಿನವರಿಗೆ ಈ ರೋಗದ ಬಗ್ಗೆ ತಿಳಿದಿಲ್ಲ ನನ್ನ ನೋವಿನ ಮೂಲ ಕಾರಣವನ್ನು ಕಂಡುಕೊಳ್ಳಲು ಸಹಾಯ ಮಾಡಿದ ನನ್ನ ವೈದ್ಯರಾದ ಗೈನಾಕ್ ಡಾ ನೀತಾ ವಾರ್ಟಿ ಮತ್ತು ನನ್ನ ಜಿಪಿ ಡಾ ಸುನೀತಾ ಬ್ಯಾನರ್ಜಿ ಇಬ್ಬರಿಗೂ ನಾನು ಧನ್ಯವಾದ ಎಂದಿದ್ದಾರೆ.
ಈಗ ನಾನು ಈ ರೋಗವನ್ನು ಶಸ್ತ್ರಚಿಕಿತ್ಸೆಯಿಂದ ತೆಗೆದುಹಾಕಿದ್ದೇನೆ ನನ್ನ ಆರೋಗ್ಯ ಮತ್ತಷ್ಟು ಸುಧಾರಿಸಲು ಎದುರು ನೀಡುತ್ತಿದ್ದೇನೆ. ಈಗೀಗ ನೋವಿಲ್ಲದ ದಿನಗಳನ್ನು ಕಳೆಯುತ್ತಿದ್ದೇನೆ. ಹೀಗಾಗಿ ಎಲ್ಲಾ ಮಹಿಳೆಯರೂ ಈ ಎಂಡೊಮೆಟ್ರಿಯೊಸಿಸ್ ಬಗ್ಗೆ ಜಾಗೃತರಾಗಿ ಮತ್ತು ಚಿಕಿತ್ಸೆ ಪಡೆಯಿರಿ ಎಂದು ಸಲಹೆ ನೀಡಿದ್ದಾರೆ. ಎಂಡೊಮೆಟ್ರಿಯೊಸಿಸ್ ಒಂದು ಕಾಯಿಲೆಯಾಗಿದ್ದು, ಇದರಲ್ಲಿ ಗರ್ಭಾಶಯದ ಒಳಪದರವನ್ನು ಹೋಲುವ ಅಂಗಾಂಶವು ಗರ್ಭಾಶಯದ ಹೊರಗೆ ಬೆಳೆಯಲು ಪ್ರಾರಂಭಿಸುತ್ತದೆ. ಈ ಕಾಯಿಲೆಯಿಂದ ಸೊಂಟದಲ್ಲಿ ತೀವ್ರವಾದ ನೋವನ್ನು ಉಂಟುಮಾಡುತ್ತದೆ. ಜೊತೆಗೆ ಗರ್ಭಿಣಿಯಾಗಲು ಮಹಿಳೆಯರಿಗೆ ಕಷ್ಟವಾಗುತ್ತದೆ. ಎಂಡೊಮೆಟ್ರಿಯೊಸಿಸ್ಗೆ ತುತ್ತಾದ ಮಹಿಳೆಯರ ಮೊದಲ ಮುಟ್ಟಿನ ಅವಧಿಯಲ್ಲಿ ಪ್ರಾರಂಭವಾಗಬಹುದು ಅದು ಋತುಬಂಧದವರೆಗೆ ಇರುತ್ತದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296