nammatumakuru

    Subscribe to Updates

    Get the latest creative news from FooBar about art, design and business.

    What's Hot

    ಇಂದು ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ: ವಿದ್ಯಾರ್ಥಿಗಳು ಗಮನಿಸಬೇಕಾದ ಅಂಶಗಳು

    April 9, 2026

    ತುಮಕೂರು: ಹಣದ ವಿಚಾರಕ್ಕೆ ತಂದೆಯನ್ನೇ ಕೊಂದ ಮಗನಿಗೆ ಜೀವಾವಧಿ ಶಿಕ್ಷೆ

    April 9, 2026

    ಶಿರಾದ ಹೊನ್ನೇನಹಳ್ಳಿಯಲ್ಲಿ ಕುಡಿಯುವ ನೀರಿಗಾಗಿ ಗ್ರಾಮಸ್ಥರ ಪ್ರತಿಭಟನೆ; ಕೊಳವೆಬಾವಿ ಕೊರೆಯುವ ವಾಹನ ತಡೆದು ಆಕ್ರೋಶ

    April 9, 2026
    Facebook Twitter Instagram
    ಟ್ರೆಂಡಿಂಗ್
    • ಇಂದು ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ: ವಿದ್ಯಾರ್ಥಿಗಳು ಗಮನಿಸಬೇಕಾದ ಅಂಶಗಳು
    • ತುಮಕೂರು: ಹಣದ ವಿಚಾರಕ್ಕೆ ತಂದೆಯನ್ನೇ ಕೊಂದ ಮಗನಿಗೆ ಜೀವಾವಧಿ ಶಿಕ್ಷೆ
    • ಶಿರಾದ ಹೊನ್ನೇನಹಳ್ಳಿಯಲ್ಲಿ ಕುಡಿಯುವ ನೀರಿಗಾಗಿ ಗ್ರಾಮಸ್ಥರ ಪ್ರತಿಭಟನೆ; ಕೊಳವೆಬಾವಿ ಕೊರೆಯುವ ವಾಹನ ತಡೆದು ಆಕ್ರೋಶ
    • ಪಾವಗಡ: ರಾಮಕೃಷ್ಣ ಸೇವಾಶ್ರಮದಿಂದ ಮೇವು ವಿತರಣೆ
    • ಕುಣಿಗಲ್: ದಲಿತ ಮುಖಂಡರುಗಳೊಂದಿಗೆ ಕುಂದುಕೊರತೆ ಸಭೆ
    • ಶಿರಾದ ಸಪ್ತಗಿರಿ ಬಡಾವಣೆಯಲ್ಲಿ ಶಿಥಿಲಗೊಂಡ ವಿದ್ಯುತ್ ಕಂಬ: ಕೂಡಲೇ ಬದಲಿಸಲು ಸಾರ್ವಜನಿಕರ ಒತ್ತಾಯ
    • ತಿಪಟೂರಿನ ಎಚ್.ಬೈರಾಪುರದಲ್ಲಿ ಕರಿಯಮ್ಮ, ಪ್ಲೇಗಿನಮ್ಮ ದೇವಿ ಜಾತ್ರೆ: ವಿಜೃಂಭಣೆಯ ರಥೋತ್ಸವಕ್ಕೆ ತೆರೆ
    • ತುಮಕೂರು ಜನತಾ ದರ್ಶನದಲ್ಲೇ ಅವ್ಯವಸ್ಥೆಯ ದರ್ಶನ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಚಿವ ಪರಮೇಶ್ವರ್ ಗರಂ, ದೂರುಗಳ ರಾಶಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬಿತ್ತನೆ ಬೀಜ ಮಾರಾಟ ಕೇಂದ್ರಗಳಲ್ಲಿ ದರಪಟ್ಟಿ ಪ್ರದರ್ಶಿಸಲು:  ಎಡಿಸಿ ಸೂಚನೆ
    ತುಮಕೂರು May 18, 2025

    ಬಿತ್ತನೆ ಬೀಜ ಮಾರಾಟ ಕೇಂದ್ರಗಳಲ್ಲಿ ದರಪಟ್ಟಿ ಪ್ರದರ್ಶಿಸಲು:  ಎಡಿಸಿ ಸೂಚನೆ

    By adminMay 18, 2025No Comments2 Mins Read
    dr n thippeswamy

    ತುಮಕೂರು: ರೈತರ ಅನುಕೂಲಕ್ಕಾಗಿ ಬಿತ್ತನೆ ಬೀಜ ಹಾಗೂ ಕೃಷಿ ಉಪಕರಣಗಳ ದರಪಟ್ಟಿಯನ್ನು ಜಿಲ್ಲೆಯ ಎಲ್ಲಾ ರೈತ ಸಂಪರ್ಕ ಕೇಂದ್ರ ಮತ್ತು ಬೀಜ ಮಾರಾಟ ಕೇಂದ್ರಗಳಲ್ಲಿ ಕಡ್ಡಾಯವಾಗಿ ಪ್ರದರ್ಶಿಸಬೇಕೆಂದು ಅಪರ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

    ಸೋಮವಾರ ಸಂಜೆ ಜಿಲ್ಲಾಧಿಕಾರಿ ಕಚೇರಿ ನ್ಯಾಯಿಕ ಸಭಾಂಗಣದಲ್ಲಿ ಮುಂಗಾರು ಹಂಗಾಮಿಗಾಗಿ ಬಿತ್ತನೆ ಬೀಜ ಮತ್ತು ರಸಗೊಬ್ಬರಗಳ ವಿತರಣೆ, ದಾಸ್ತಾನಿಗೆ ಸಂಬಂಧಿಸಿದಂತೆ ಪೂರ್ವಭಾವಿ ಸಭೆ ನಡೆಸಿ ಮಾತನಾಡಿದ ಅವರು, ಜಿಲ್ಲೆಯ ಎಲ್ಲಾ ರೈತ ಸಂಪರ್ಕ ಕೇಂದ್ರಗಳಲ್ಲಿ ಬಿತ್ತನೆ ಬೀಜಗಳನ್ನು ಸರ್ಕಾರ ನಿಗದಿಪಡಿಸಿದ ದರದಲ್ಲೇ ಮಾರಾಟ ಮಾಡಬೇಕು. ರೈತರಿಗೆ ಅಗತ್ಯ ಬಿತ್ತನೆ ಬೀಜಗಳು ಸುಲಭವಾಗಿ ಲಭ್ಯವಾಗುವಂತೆ ಕ್ರಮ ಕೈಗೊಳ್ಳಬೇಕು. ಬಿತ್ತನೆ ಬೀಜ ಮಾರಾಟ ಕೇಂದ್ರಗಳಲ್ಲಿ ಬೀಜಗಳ ಕೊರತೆಯಾಗದಂತೆ ಕ್ರಮ ಕೈಗೊಳ್ಳಬೇಕೆಂದು ನಿರ್ದೇಶನ ನೀಡಿದರು.


    Provided by
    Provided by

    ಜಿಲ್ಲೆಯಲ್ಲಿ ಮೇ 20 ರಿಂದ ಬಿತ್ತನೆ ಬೀಜಗಳ ವಿತರಣೆ ಪ್ರಾರಂಭಿಸಲಾಗುತ್ತಿದ್ದು, ರೈತರಿಗೆ ಗುಣಮಟ್ಟದ ಬೀಜ ಒದಗಿಸುವ ದೃಷ್ಟಿಯಿಂದ ವಿತರಣೆಗೆ ಮುನ್ನ ಪ್ರತಿಯೊಂದು ಕೇಂದ್ರದಲ್ಲಿಯೂ ಬೀಜದ ತಳಿ ಹಾಗೂ ಪ್ರತಿ ಲಾಟ್‌ನಿಂದ ಬಿತ್ತನೆ ಬೀಜಗಳ ಮಾದರಿಗಳನ್ನು ಸಂಗ್ರಹಿಸಿ ವಿಶ್ಲೇಷಣೆಗೆ ಒಳಪಡಿಸಿ ಗುಣಮಟ್ಟವನ್ನು ಖಾತ್ರಿ ಪಡಿಸಿಕೊಂಡ ನಂತರ ವಿತರಣೆ ಕಾರ್ಯ ಕೈಗೊಳ್ಳಬೇಕು ಎಂದು ತಿಳಿಸಿದರು.

    ಕೃಷಿ ಇಲಾಖೆಯ ಜಂಟಿ ನಿರ್ದೇಶಕ ರಮೇಶ್ ಮಾತನಾಡಿ, ಬಿತ್ತನೆ ಬೀಜ ಮಾರಾಟ ಮಾಡಲು ಜಿಲ್ಲೆಯಲ್ಲಿ 50 ರೈತ ಸಂಪರ್ಕ ಕೇಂದ್ರಗಳೊಂದಿಗೆ ಗುಬ್ಬಿ ತಾಲೂಕಿನ ಚೇಳೂರು; ಮಧುಗಿರಿ ತಾಲ್ಲೂಕು ಕಸಬಾ ಹಾಗೂ ಕೊಡಿಗೇನಹಳ್ಳಿ; ಪಾವಗಡ ತಾಲ್ಲೂಕು ಕಸಬಾ ಎಪಿಎಂಸಿ, ನಾಗಲಮಡಿಕೆ, ವೈ.ಎನ್.ಹೊಸಕೋಟೆ, ಲಿಂಗದಹಳ್ಳಿ, ಮಂಗಳವಾಡ; ಶಿರಾ ಎಪಿಎಂಸಿ, ತಾವರೆಕೆರೆ, ಪಟ್ಟನಾಯಕನಹಳ್ಳಿ, ಹುಲಿಕುಂಟೆ ಸೇರಿ ಒಟ್ಟು 12 ಹೆಚ್ಚುವರಿ ಮಾರಾಟ ಕೇಂದ್ರಗಳನ್ನು ತೆರೆಯಲಾಗುವುದು ಎಂದು ತಿಳಿಸಿದರು.

    ರೈತ ಮುಖಂಡ ಆರಾಧ್ಯ ಮಾತನಾಡುತ್ತಾ, ಖಾಸಗಿ ರಸಗೊಬ್ಬರ ಮಾರಾಟ ಕೇಂದ್ರಗಳಲ್ಲಿ ಸರ್ಕಾರ ನಿಗದಿಪಡಿಸಿದ ದರಕ್ಕಿಂತ ಹೆಚ್ಚಿನ ದರದಲ್ಲಿ ರಸಗೊಬ್ಬರವನ್ನು ಮಾರಾಟ ಮಾಡಲಾಗುತ್ತಿದೆ. ಜೊತೆಗೆ ರೈತರಿಗೆ ಬ್ಯಾಂಕುಗಳಲ್ಲಿ ತ್ವರಿತವಾಗಿ ಸಾಲ ಲಭ್ಯವಾಗದ ಕಾರಣ ಅವರು ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಮೊರೆ ಹೋಗಬೇಕಾದ ಪರಿಸ್ಥಿತಿ ಉಂಟಾಗುತ್ತಿದೆ. ರೈತರ ಸಮಸ್ಯೆಗಳನ್ನು ಸೂಕ್ಷö್ಮವಾಗಿ ಪರಿಗಣಿಸಿ ತಕ್ಷಣವೇ ಸೂಕ್ತ ಕ್ರಮ ಕೈಗೊಳ್ಳುವಂತೆ ಕೃಷಿ ಇಲಾಖೆಯ ಅಧಿಕಾರಿಗಳಲ್ಲಿ ಮನವಿ ಮಾಡಿದರು.

    ಸಭೆಯಲ್ಲಿ ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಶಾರದಮ್ಮ, ತುಮಕೂರು ಉಪ ಕೃಷಿ ನಿರ್ದೇಶಕ ಹುಲಿರಾಜ್, ಮಧುಗಿರಿ ಉಪ ಕೃಷಿ ನಿರ್ದೇಶಕ ಚಂದ್ರಕುಮಾರ್ ಎಚ್.ಎಲ್., ಸಹಾಯಕ ಕೃಷಿ ನಿರ್ದೇಶಕರು ಹಾಗೂ ವಿವಿಧ ರೈತ ಮುಖಂಡರು ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ತುಮಕೂರು: ಹಣದ ವಿಚಾರಕ್ಕೆ ತಂದೆಯನ್ನೇ ಕೊಂದ ಮಗನಿಗೆ ಜೀವಾವಧಿ ಶಿಕ್ಷೆ

    April 9, 2026

    ಕುಣಿಗಲ್: ದಲಿತ ಮುಖಂಡರುಗಳೊಂದಿಗೆ ಕುಂದುಕೊರತೆ ಸಭೆ

    April 9, 2026

    ತುಮಕೂರು ಜನತಾ ದರ್ಶನದಲ್ಲೇ ಅವ್ಯವಸ್ಥೆಯ ದರ್ಶನ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಚಿವ ಪರಮೇಶ್ವರ್ ಗರಂ, ದೂರುಗಳ ರಾಶಿ

    April 9, 2026

    Comments are closed.

    Our Picks

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಇಂದು ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ: ವಿದ್ಯಾರ್ಥಿಗಳು ಗಮನಿಸಬೇಕಾದ ಅಂಶಗಳು

    April 9, 2026

    ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ (KSEAB) 2026ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು…

    ತುಮಕೂರು: ಹಣದ ವಿಚಾರಕ್ಕೆ ತಂದೆಯನ್ನೇ ಕೊಂದ ಮಗನಿಗೆ ಜೀವಾವಧಿ ಶಿಕ್ಷೆ

    April 9, 2026

    ಶಿರಾದ ಹೊನ್ನೇನಹಳ್ಳಿಯಲ್ಲಿ ಕುಡಿಯುವ ನೀರಿಗಾಗಿ ಗ್ರಾಮಸ್ಥರ ಪ್ರತಿಭಟನೆ; ಕೊಳವೆಬಾವಿ ಕೊರೆಯುವ ವಾಹನ ತಡೆದು ಆಕ್ರೋಶ

    April 9, 2026

    ಪಾವಗಡ: ರಾಮಕೃಷ್ಣ ಸೇವಾಶ್ರಮದಿಂದ ಮೇವು ವಿತರಣೆ

    April 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.