ತುಮಕೂರು: ಜಿಲ್ಲಾಡಳಿತದ ವತಿಯಿಂದ ಸೆಪ್ಟೆಂಬರ್ 4 ರಂದು ಶ್ರೀ ಕೃಷ್ಣ ಜನ್ಮಾಷ್ಟಮಿಯಂದು ಆಚರಿಸಲಾಗುವ ಶ್ರೀ ಕೃಷ್ಣ ಜಯಂತಿ ಕಾರ್ಯಕ್ರಮದ ಪ್ರಯುಕ್ತ ಟೌನ್ಹಾಲ್ ವೃತ್ತದಿಂದ ಡಾ: ಗುಬ್ಬಿ ವೀರಣ್ಣ ಕಲಾಕ್ಷೇತ್ರದವರೆಗೆ ಶ್ರೀ ಕೃಷ್ಣ ಭಾವಚಿತ್ರವನ್ನು ಬೆಳ್ಳರಥದಲ್ಲಿರಿಸಿ ಮೆರವಣಿಗೆ ನಡೆಸಬೇಕೆಂದು ಅಪರ ಜಿಲ್ಲಾಧಿಕಾರಿ ಡಾ: ಎನ್. ತಿಪ್ಪೇಸ್ವಾಮಿ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿಂದು ಪೂರ್ವಭಾವಿ ಸಭೆ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಶ್ರೀ ಕೃಷ್ಣ ಜಯಂತಿ ವೇದಿಕೆ ಕಾರ್ಯಕ್ರಮವನ್ನು ನಗರದ ಡಾ: ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ಏರ್ಪಡಿಸುವ, ಆಹ್ವಾನ ಪತ್ರಿಕೆ ವಿತರಣೆ, ಮೆರವಣಿಗೆಗೆ ಕಲಾತಂಡಗಳನ್ನು ಒದಗಿಸುವ, ಶ್ರೀ ಕೃಷ್ಣ ಭಾವಚಿತ್ರಕ್ಕೆ ಹೂವಿನ ಅಲಂಕಾರ, ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡುವ ಕುರಿತು ಸಮುದಾಯದ ಮುಖಂಡರೊಂದಿಗೆ ಚರ್ಚಿಸಿದರು.
ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಈಶ್ವರ ಕು.ಮಿರ್ಜಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಶ್ರೀ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ಸೇರಿದಂತೆ ವಿವಿಧ ಇಲಾಖೆಗಳ ಮುಖ್ಯಸ್ಥರು ಹಾಗೂ ಜಿಲ್ಲೆಯ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಗು ಮುಖಂಡರು ಹಾಜರಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
