ರಾಜ್ಯ ಸರ್ಕಾರದ 5 ಗ್ಯಾರಂಟಿ ಯೋಜನೆಗಳಲ್ಲಿ ಶಕ್ತಿ ಯೋಜನೆ ಕೂಡ ಒಂದು. ಬಹಳಷ್ಟು ಮಂದಿ ಮಹಿಳಾ ಮಣಿಗಳು ಇದರ ಪ್ರಯೋಜನವನ್ನು ಪಡೆದುಕೊಳ್ಳುತ್ತಿದ್ದಾರೆ. ಇದರಿಂದಾಗಿ ಪ್ರಯಾಣಿಕರ ಸಂಖ್ಯೆ ಹೆಚ್ಚಿದೆ. ಹೀಗಾಗಿ ಮುಂದಿನ 12 ತಿಂಗಳುಗಳಲ್ಲಿ ಸುಮಾರು 6,100 ಹೊಸ ಬಸ್ ಗಳನ್ನು ಸೇವೆಗೆ ಸೇರಿಸಲು ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿದು ಬಂದಿದೆ.
ಈಗಾಗಲೇ 260 ಬಸ್ ಗಳನ್ನು ಖರೀದಿಸಲು ಮಂಜೂರಾತಿ ನೀಡಲಾಗಿದ್ದು, ಅದರಲ್ಲಿ 100 ಪಲ್ಲಕ್ಕಿ ನಾನ್ ಎಸಿ ಬಸ್ ಗಳು, 120 ನಾನ್ ಎಸಿ ಬಸ್ ಗಳು ಮತ್ತು ಉತ್ತರ ಕರ್ನಾಟಕಕ್ಕಾಗಿ 40 ಎಸಿ ಬಸ್ ಗಳಿಗೆ ಅನುಮೋದನೆ ನೀಡಲಾಗಿದೆ. 50 ಕೋಟಿ ವೆಚ್ಚದಲ್ಲಿ ಸ್ಟಾರ್ಟ್ಅಪ್ಗಳನ್ನು ಪ್ರೋತ್ಸಾಹಿಸುವ ಯೋಜನೆಗಳ ಜೊತೆಗೆ ರಾಜ್ಯಾದ್ಯಂತ ಕೈಗಾರಿಕಾ ಶ್ರೇಷ್ಠತೆಯ ಕೇಂದ್ರಗಳನ್ನು ಸರ್ಕಾರ ಸ್ಥಾಪಿಸಲಿದೆ ಎನ್ನುವ ವಿಚಾರ ಇದೀಗ ಹೊರಬಿದ್ದಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


