ತುಮಕೂರು: ತುಮಕೂರು ವಿಶ್ವವಿದ್ಯಾನಿಲಯ ಹಾಗೂ ಸರ್ಕಾರಿ ಡಿಪ್ಲೋಮಾ ಕಾಲೇಜಿನ ಸುತ್ತ–ಮುತ್ತಲಿರುವ ಸಾರ್ವಜನಿಕ ಪ್ರಯಾಣಿಕರು ಪ್ರತಿ ನಿತ್ಯ ತುಮಕೂರು ಬಸ್ ನಿಲ್ದಾಣಕ್ಕೆ ಬಂದು ಬೆಂಗಳೂರಿಗೆ ತೆರಳುವ ಸಮಸ್ಯೆಯನ್ನು ತಪ್ಪಿಸುವ ಉದ್ದೇಶದಿಂದ ತುಮಕೂರು ವಿವಿ ಬಸ್ ನಿಲ್ದಾಣದಿಂದ ಬೆಂಗಳೂರಿಗೆ ಪ್ರಯಾಣಿಸಲು ಪ್ರತಿ ನಿತ್ಯ ಬೆಳಿಗ್ಗೆ 7:30 ಗಂಟೆಗೆ ಬಸ್ ವ್ಯವಸ್ಥೆ ಕಲ್ಪಿಸಲಾಗಿತ್ತು. ಪ್ರಸ್ತುತ ಪ್ರಯಾಣಿಕರ ಸಂಖ್ಯೆ ಹೆಚ್ಚಳವಾಗಿರುವುದರಿಂದ ಬೆಳಿಗ್ಗೆ 7:15ಕ್ಕೆ ಮತ್ತೊಂದು ಹೆಚ್ಚುವರಿ ಸಾರಿಗೆ ವ್ಯವಸ್ಥೆ ಮಾಡಲಾಗಿದೆ.
ಸರ್ಕಾರಿ ರಜಾದಿನಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ದಿನಗಳಲ್ಲೂ ಬಸ್ಸುಗಳು ಸಂಚರಿಸಲಿದ್ದು, ಪ್ರಯಾಣಿಕರು ಇದರ ಸದುಪಯೋಗ ಪಡಿಸಿಕೊಳ್ಳಬೇಕೆಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q