ಕೊರಟಗೆರೆ : ಪಟ್ಟಣದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಮುಂದೆ ಕನ್ನಡಪರ ಸಂಘಟನೆಗಳ ಒಕ್ಕೂಟದ ವತಿಯಿಂದ ವಿವಿಧ ಕನ್ನಡಪರ ಸಂಘಟನೆಗಳ ಅಧ್ಯಕ್ಷರು ಹಾಗೂ ಮುಖಂಡರ ನೇತೃತ್ವದಲ್ಲಿ ಅದ್ದೂರಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಚಾಲನೆ.
66ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಆಚರಿಸಿ ರಾಜರತ್ನ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿ ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪಾರ್ಚನೆಯನ್ನೂ ಮಾಡಿ ಕೊರಟಗೆರೆ ಪಟ್ಟಣದ ಮುಖ್ಯರಸ್ತೆಗಳಲ್ಲಿ ಬೈಕ್ ರ್ಯಾಲಿ ನಡೆಸಿ ತಾಯಿ ಭುವನೇಶ್ವರಿಗೆ ಜೈಕಾರ ವನ್ನು ಕೂಗಿ ವೈಭವ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಕರ್ನಾಟಕ ರಕ್ಷಣ ವೇದಿಕೆ ಅಧ್ಯಕ್ಷ ಹಾಗೂ ಕೊರಟಗೆರೆ ಪಟ್ಟಣ ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷರಾದ ನಟರಾಜ್,ಕರ್ನಾಟಕ ರಣಧೀರರ ವೇದಿಕೆ ರಾಜ್ಯ ಸಂಘಟನಾ ಕಾರ್ಯದರ್ಶಿ ಕೆ.ಎನ್ ದೇವರಾಜ್, ಕರ್ನಾಟಕ ರಣಧೀರರ ವೇದಿಕೆ ತಾಲ್ಲೂಕು ಅಧ್ಯಕ್ಷರು ಹಾಗೂ ಪತ್ರಕರ್ತರಾದ ಮಂಜುಸ್ವಾಮಿ.ಎಂ. ಎನ್. ಕನ್ನಡ ಪರ ಸಂಘಟನೆಯ ಮುಖಂಡರುಗಳಾದ ದಿನೇಶ್,ರವಿಕುಮಾರ್, ಉಮೇಶ್, ಮಾರುತಿ,ಕಲೀಮ್, ಪುನೀತ್, ಇತರೇ ಮುಖಂಡರುಗಳು ಹಾಜರಿದ್ದರು.
ವರದಿ : ಮಂಜುಸ್ವಾಮಿ.ಎಂ.ಎನ್., ಕೊರಟಗೆರೆ.