ಬೆಳಗಾವಿ : ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಭಾಗಿಯಾಗುವ ವಿವಿಧ ಇಲಾಖೆಯ ಸರ್ಕಾರಿ ನೌಕರರು, ಕಡ್ಡಾಯವಾಗಿ ಇಲಾಖಾ ಗುರುತಿನ ಚೀಟಿ ಧರಿಸಿ, ಕಾರ್ಯಕಲಾಪಗಳಲ್ಲಿ ಭಾಗಿಯಾಗುವಂತೆ ಸರ್ಕಾರ ಸೂಚಿಸಿದೆ.
ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದು, ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಯಲಿದೆ.
ಈ ಕಾರ್ಯಕಲಾಪದಲ್ಲಿ ಭಾಗವಹಿಸುವಂತ ಎಲ್ಲಾ ಅಧಿಕಾರಿ, ಸಿಬ್ಬಂದಿಗಳು ಕರ್ನಾಟಕ ಸರ್ಕಾರ ಸಚಿವಾಲಯದಿಂದ ನೀಡಲಾಗುವ ಅಧಿಕೃತ ಗುರುತಿನ ಚೀಟಿಯನ್ನು ಕಡ್ಡಾಯವಾಗಿ ಧರಿಸಿ ಹಾಜರಾಗುವಂತೆ ತಿಳಿಸಿದೆ.
ಇನ್ನೂ ಭದ್ರತೆಯ ಹಿನ್ನಲೆಯಲ್ಲಿ ಪ್ರವೇಶಕ್ಕೆ ಸರ್ಕಾರಿ ನೌಕರರು ಗುರುತಿನ ಚೀಟಿಯನ್ನು ಧರಿಸಿದ್ದರೇ ಮಾತ್ರವೇ ಪ್ರವೇಶಕ್ಕೆ ಅನುಮತಿಸಲಾಗುವುದು ಎಂದು ಬೆಳಗಾವಿ ಜಿಲ್ಲಾಧಿಕಾರಿಗಳು ತಿಳಿಸಿರುತ್ತಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy