ಅಮರಾವತಿ: ತಿರುಪತಿ ತಿಮ್ಮಪ್ಪನ ದೇಗುಲದ ಲಡ್ಡು ಪ್ರಸಾದದಲ್ಲಿ ಕಲಬೆರಕೆ ಮಾಡಿರುವ ವಿವಾದಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ನಾಲ್ವರು ಆರೋಪಿಗಳನ್ನು ಬಂಧಿಸಿದೆ.
ಉತ್ತರಾಖಂಡ ರೂರ್ಕಿಯ ಭೋಲೆ ಬಾಬ ಡೈರಿಯ ಮಾಜಿ ನಿರ್ದೇಶಕ ಪಿವಿನ್ ಜೈನ್, ಪೊಮಿಲ್ ಜೈನ್, ಪೂನಂಬಾಕ್ಕಂನ ವೈಷ್ಣವಿ ಡೈರಿ ಸಿಇಒ ಅಪೂರ್ವ ವಿನಯ್ ಕಾಂತ್ ಚಾವ್ಡಾ, ದುಂಡಿಗಲ್ ಎ ಆರ್ ಡೈರಿ ಎಂಡಿ ರಾಜಶೇಖರನ್ ಬಂಧಿತ ಆರೋಪಿಗಳಾಗಿದ್ದಾರೆ.
ಟೆಂಡರ್ ಪಡೆಯುವ ಹಂತದಿಂದ, ಪೂರೈಕೆ ತನಕ ಮಾಡಿರುವ ನಿಯಮ ಉಲ್ಲಂಘನೆ ಹಿನ್ನೆಲೆ ನಾಲ್ವರನ್ನು ಸಿಬಿಐ ಅಧಿಕಾರಿಗಳ ಬಂಧಿಸಿದ್ದು, ನಕಲಿ ದಾಖಲೆ, ನಕಲಿ ಸೀಲ್ ಗಳನ್ನು ಬಳಕೆ ಮಾಡಿದ ಆರೋಪ ಇವರ ಮೇಲಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4