ಬಾಬ್ರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಪ್ರಚೋದನೆ ನೀಡಿದ್ದಾರೆ ಎಂಬ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ವಜಾಗೊಳಿಸಿದೆ. ಈ ಮೂಲಕ ಬಿಜೆಪಿ ಹಿರಿಯ ಮುಖಂಡರಾದ ಎಲ್ ಕೆ ಆಡ್ವಾಣಿ, ಉಮಾಭಾರತಿ, ಮನೋಹರ್ ಜೋಷಿ ಅವರಿಗೆ ಬಿಗ್ ರಿಲೀಫ್ ಸಿಕ್ಕಿದಂತಾಗಿದೆ.
ನ್ಯಾಯಮೂರ್ತಿ ರಮೇಶ್ ಸಿನ್ಹಾ ಮತ್ತು ನ್ಯಾಯಮೂರ್ತಿ ಸರೋಜ್ ಯಾದವ್ ಅವರನ್ನೊಳಗೊಂಡ ಪೀಠ, ಅಡ್ವಾಣಿ, ಉಮಾ ಭಾರತಿ, ದಿವಂಗತ ಕಲ್ಯಾಣ್ ಸಿಂಗ್, ಮನೋಹರ್ ಜೋಷಿ ಸೇರಿದಂತೆ 32 ಮಂದಿ ವಿರುದ್ಧದ ಪ್ರಕರಣವನ್ನು ವಜಾಗೊಳಿಸಿದೆ.
ಅಯೋಧ್ಯೆಯ ಇಬ್ಬರು ಮುಸ್ಲಿಮ್ ಮುಖಂಡರು ಬಾಬ್ರಿ ಮಸೀದಿ ಧ್ವಂಸಗೊಳಿಸಿ ರಾಮ ಮಂದಿರ ಸ್ಥಾಪನೆಗೆ ಪ್ರಚೋದನೆ ನೀಡಿ ಗಲಭೆಗೆ ಕಾರಣರಾಗಿದ್ದಾರೆ ಎಂದು ಆರೋಪಿಸಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅಲ್ಲದೇ ಇವರ ಮೇಲಿದ್ದ ಆರೋಪಗಳನ್ನು ವಜಾಗೊಳಿಸಿದ್ದ ಸಿಬಿಐ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ್ದರು.
2020ರಲ್ಲಿ ಸಿಬಿಐ ನ್ಯಾಯಾಲಯ ಬಾಬ್ರಿ ಮಸೀದಿ ಧ್ವಂಸ ಪ್ರಕರಣ ಪೂರ್ವ ಯೋಜಿತ ಕೃತ್ಯ ಎಂದು ಹೇಳಿತ್ತು. ಆದರೆ ಅದೇ ನ್ಯಾಯಾಲಯ ಸಾಕ್ಷ್ಯಾಧಾರಗಳ ಕೊರತೆ ಹಾಗೂ ಸುಪ್ರೀಂಕೋರ್ಟ್ ವಿವಾದ ಬಗೆ ಹರಿಸಿ ತೀರ್ಪು ನೀಡಿದ ಹಿನ್ನೆಲೆಯಲ್ಲಿ ಅರ್ಜಿಯನ್ನು ವಜಾಗೊಳಿಸಿತ್ತು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy