ತುಮಕೂರು: ಲಾಲ್ ಕೃಷ್ಣ ಅಡ್ವಾಣಿ ಸಾವಿನ ಬಗ್ಗೆ ಅಧಿಕೃತ ಮಾಹಿತಿ ಮುನ್ನವೇ ಕೇಂದ್ರ ಸಚಿವ ವಿ.ಸೋಮಣ್ಣ ಶೃದ್ಧಾಂಜಲಿ ಸಲ್ಲಿಸಿದ್ದಾರೆ ಎಂಬ ಆರೋಪ ವ್ಯಕ್ತವಾಗಿದೆ.
ಮಾಜಿ ಉಪಪ್ರಧಾನಿ ಲಾಲ್ ಕೃಷ್ಣ ಅಡ್ವಾಣಿಗೆ ಶೃದ್ಧಾಂಜಲಿ ಸಲ್ಲಿಸಿದ ಸೋಮಣ್ಣ ಬಹಿರಂಗ ಸಭೆಯಲ್ಲಿಯೇ ಶೃದ್ಧಾಂಜಲಿ ಸಲ್ಲಿಸಿದ್ದಾರೆ.
ತುಮಕೂರು ಜಿಲ್ಲೆ ಗುಬ್ಬಿಯಲ್ಲಿ ಆಯೋಜನೆಗೊಂಡಿದ್ದ ಅಭಿನಂದನಾ ಸಭೆಯಲ್ಲಿ ದೆಹಲಿಗೆ ಹೊರಡುವ ಕಾರಣ ನೀಡಿ ಸಭೆ ಮೊಟಕುಗೊಳಿಸಿದ ಸೋಮಣ್ಣ ಇದೀಗ ತಾನೇ ಮಾಹಿತಿ ಬಂದಿದೆ, ಅಡ್ವಾಣಿಯವರು ಸಾವನ್ನಪ್ಪಿದ್ದಾರೆ ಎಂದರು.
ನಾನು ದೆಹಲಿಗೆ ಹೋಗಬೇಕಿದೆ ಎಂದ ಸೋಮಣ್ಣ, ಎಲ್ಲರೂ ಎದ್ದು ನಿಂತು ಮೌನಾಚರಣೆ ಮಾಡುವಂತೆ ಸಭೆಯಲ್ಲಿ ಸೋಮಣ್ಣ ಮನವಿ ಮಾಡಿಯೇ ಬಿಟ್ಟರು. ಸೋಮಣ್ಣಗೆ ಗುಬ್ಬಿಯ ಬಿಜೆಪಿ–ಜೆಡಿಎಸ್ ಮುಖಂಡರು ಸಾಥ್ ನೀಡಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA