ತುಮಕೂರು: ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಪೊಲೀಸ್ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಹಾನಗರಪಾಲಿಕೆ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಯುವಜನ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ ಮಾರ್ಚ್ 21ರಂದು ನಗರದ ಜಿಲ್ಲಾ ಬಾಲಭವನ ಸಭಾಂಗಣದಲ್ಲಿ ಮದ್ಯ ಹಾಗೂ ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸುವ “ಜಿಲ್ಲಾ ಮಟ್ಟದ ಜನ ಜಾಗೃತಿ ಕಾರ್ಯಕ್ರಮ”ವನ್ನು ಆಯೋಜಿಸಲಾಗಿದೆ.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು, ಜಿಲ್ಲೆಯ ವಿವಿಧ ಜನಪ್ರತಿನಿಧಿಗಳು, ಗಣ್ಯರು, ಅಧಿಕಾರಿಗಳು ಸೇರಿದಂತೆ ಮತ್ತಿತರರು ಭಾಗವಹಿಸುವರು ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಜಿ. ಹಿಮಂತರಾಜು ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4