ಕೇರಳದಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆಯಾಗಿದ್ದು, ಕರ್ನಾಟಕಕ್ಕೂ ಆತಂಕ ಶುರುವಾಗಿದೆ. ಕೇರಳದ ಕೊಟ್ಟಾಯಂ ಜಿಲ್ಲೆಯ ಮಡಕತ್ತಾರ ಪಂಚಾಯತ್‌ನ ಖಾಸಗಿ ಫಾರ್ಮ್‌ನಲ್ಲಿ ಆಫ್ರಿಕನ್ ಹಂದಿ ಜ್ವರ ಪ್ರಕರಣ ಬೆಳಕಿಗೆ ಬಂದಿದೆ.
ಹಂದಿ ಜ್ವರ ಪ್ರಕರಣಗಳು ದೃಢಪಟ್ಟ ನಂತರ ಜಿಲ್ಲಾಧಿಕಾರಿ ಖಾಸಗಿ ಜಮೀನಿನಲ್ಲಿ 310 ಹಂದಿಗಳನ್ನು ಕೊಲ್ಲಲು ಆದೇಶಿಸಿದ್ದಾರೆ. ಜೊತೆಗೆ ಸೋಂಕು ಪತ್ತೆಯಾದ ಜಮೀನಿನ ಒಂದು ಕಿ.ಮೀ ವ್ಯಾಪ್ತಿಯ ಪ್ರದೇಶವನ್ನು ರೋಗ ಪೀಡಿತ ಪ್ರದೇಶವೆಂದು ಘೋಷಿಸಲಾಗಿದೆ. 10 ಕಿ.ಮೀ ವ್ಯಾಪ್ತಿಯ ಪ್ರದೇಶವನ್ನು ರೋಗ ಕಣ್ಗಾವಲು ಪ್ರದೇಶವೆಂದು ಘೋಷಿಸಲಾಗಿದೆ.
ಸೋಂಕಿತ ವಲಯದಿಂದ ಹಂದಿಗಳನ್ನು ಸಾಗಿಸದಂತೆ ಕ್ರಮ ಕೈಗೊಳ್ಳಲಾಗಿದೆ. ಹಂದಿಗಳನ್ನು ಅಕ್ರಮವಾಗಿ ಸಾಗಿಸುವುದನ್ನು ತಡೆಯಲು ಇಲಾಖೆ ಜಿಲ್ಲೆಯ ಚೆಕ್ ಪೋಸ್ಟ್ ಗಳಲ್ಲಿ ಕಟ್ಟುನಿಟ್ಟಿನ ತಪಾಸಣೆ ನಡೆಸುತ್ತಿದೆ.
ರೋಗ ದೃಢಪಟ್ಟಿರುವ ಜಮೀನಿನಲ್ಲಿ ಹಂದಿಗಳನ್ನು ಕೊಂದು ಹೂಳುವಂತೆ ಪಶುಸಂಗೋಪನಾ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಆಫ್ರಿಕನ್ ಹಂದಿ ಜ್ವರ ಒಂದು ಹಂದಿಯಿಂದ ಇನ್ನೊಂದು ಹಂದಿಗೆ ನೇರ ಸಂಪರ್ಕದ ಮೂಲಕ ಹರಡುತ್ತದೆ. ಸೋಂಕಿತ ಹಂದಿ ತಿಂದು ಬಿಟ್ಟ ಆಹಾರವನ್ನು ಆರೋಗ್ಯವಂತ ಹಂದಿ ಸೇವಿಸಿದರೆ ರೋಗ ಬಹುಬೇಗನೆ ಹರಡುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA