nammatumakuru

    Subscribe to Updates

    Get the latest creative news from FooBar about art, design and business.

    What's Hot

    ನವರಾತ್ರಿ ಸರಸ್ವತಿ ಪೂಜೆ ಯಾವಾಗ? ಆಯುಧ ಪೂಜೆ, ದಸರಾ ಶುಭ ಮುಹೂರ್ತದ ಸಂಪೂರ್ಣ ಮಾಹಿತಿ ಇಲ್ಲಿದೆ

    October 15, 2026

    ನವರಾತ್ರಿಯ ನವದುರ್ಗೆಯರ ಆರಾಧನೆ; ಪ್ರತಿದಿನದ ದೇವಿಯ ವಿಶೇಷತೆ ಏನು?

    October 15, 2026

    ಸ್ವೀಟ್ ಅಂಗಡಿ, ರೆಸ್ಟೋರೆಂಟ್, ಹೋಟೆಲ್ ಗಳ ಮೇಲೆ ದಾಳಿ: ಸ್ವಚ್ಛತೆ ಇಲ್ಲ, ಹಳೆ ತರಕಾರಿ ಬಳಕೆ ಪತ್ತೆ: ನೋಟಿಸ್

    October 15, 2026
    Facebook Twitter Instagram
    ಟ್ರೆಂಡಿಂಗ್
    • ನವರಾತ್ರಿ ಸರಸ್ವತಿ ಪೂಜೆ ಯಾವಾಗ? ಆಯುಧ ಪೂಜೆ, ದಸರಾ ಶುಭ ಮುಹೂರ್ತದ ಸಂಪೂರ್ಣ ಮಾಹಿತಿ ಇಲ್ಲಿದೆ
    • ನವರಾತ್ರಿಯ ನವದುರ್ಗೆಯರ ಆರಾಧನೆ; ಪ್ರತಿದಿನದ ದೇವಿಯ ವಿಶೇಷತೆ ಏನು?
    • ಸ್ವೀಟ್ ಅಂಗಡಿ, ರೆಸ್ಟೋರೆಂಟ್, ಹೋಟೆಲ್ ಗಳ ಮೇಲೆ ದಾಳಿ: ಸ್ವಚ್ಛತೆ ಇಲ್ಲ, ಹಳೆ ತರಕಾರಿ ಬಳಕೆ ಪತ್ತೆ: ನೋಟಿಸ್
    • ಡೆಂಗೀ ಹಾಗೂ ಚಿಕೂನ್ ಗುನ್ಯ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ವಹಿಸಿ: ಈ ಮಾಹಿತಿ ತಪ್ಪದೇ ಓದಿ!
    • ರುಡ್ ಸೆಟ್ ಸಂಸ್ಥೆ : ಫಾಸ್ಟ್ ಫುಡ್ ತಯಾರಿಕೆ ತರಬೇತಿಗೆ ಅರ್ಜಿ ಆಹ್ವಾನ
    • ಚಲಿಸುತ್ತಿರುವಾಗಲೇ ಹೊತ್ತಿ ಉರಿದ ಕಾರು: ಚಾಲಕನ ಸಮಯಪ್ರಜ್ಞೆಯಿಂದ ಬದುಕುಳಿದ ಕುಟುಂಬ
    • ಅತಿಥಿ ಶಿಕ್ಷಕರ ನೇಮಕ: ಅರ್ಜಿ ಆಹ್ವಾನ
    • ಧಾರ್ಮಿಕ ಪರಂಪರೆಗೆ ಆಧುನಿಕ ಸ್ಪರ್ಶ: ತುಮಕೂರು ದಸರಾ ಉತ್ಸವದಲ್ಲಿ ಹೊಸ ಆಕರ್ಷಣೆಗಳು ಇವು 
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » 14 ವರ್ಷಗಳ ಬಳಿಕ ಮತ್ತೊಂದು ದಲಿತ ದೌರ್ಜನ್ಯ ಕೇಸ್ ನ ತೀರ್ಪು ಪ್ರಕಟ
    ತುಮಕೂರು November 21, 2024

    14 ವರ್ಷಗಳ ಬಳಿಕ ಮತ್ತೊಂದು ದಲಿತ ದೌರ್ಜನ್ಯ ಕೇಸ್ ನ ತೀರ್ಪು ಪ್ರಕಟ

    By adminNovember 21, 2024No Comments2 Mins Read
    Atrocities Case

    ತುಮಕೂರು: ದಲಿತ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ಪ್ರಕರಣದ ತೀರ್ಪು ಹೊರ ಬಿದ್ದಿದೆ. ತುಮಕೂರು ಜಿಲ್ಲಾ ನ್ಯಾಯಾಲಯ ಬುಧವಾರ ಮಹತ್ವದ ತೀರ್ಪು ಪ್ರಕಟಿಸಿದೆ.

    ಗೋಪಾಲಪುರದ ನಿವಾಸಿ ಹೊನ್ನಮ್ಮ ಡಾಬಾ ನಡೆಸುತ್ತಿದ್ದು, ಗ್ರಾಮದಲ್ಲಿ ದೇವಸ್ಥಾನ ನರ‍್ಮಿಸಲು ಮರದ ತುಂಡು ಸಂಗ್ರಹಿಸಿಟ್ಟಿದ್ದರು. ಮರದ ತುಂಡುಗಳನ್ನು ಗ್ರಾಮದ ಕೆಲವರು ಕಳವು ಮಾಡಿದ್ದರು. ಈ ಸಂಬಂಧ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

    ಇದರಿಂದಾಗಿ ಗ್ರಾಮದ ಜನರು ಹಾಗೂ ಹೊನ್ನಮ್ಮನ ಮಧ್ಯೆ ದ್ವೇಷ ಉಂಟಾಗಿತ್ತು. ಇದೇ ವಿಚಾರವಾಗಿ ಸದಾ ಒಂದಲ್ಲೊಂದು ರೀತಿಯಲ್ಲಿ ಜಗಳ ನಡೆಯುತಿತ್ತು.
    ದಲಿತ ಸಮುದಾಯಕ್ಕೆ ಸೇರಿದ್ದ ಹೊನ್ನಮ್ಮಳನ್ನು ಅವಾಚ್ಯ ಶಬ್ದಗಳಿಂದ ನಿಂದಿಸುವುದು ಗ್ರಾಮದಲ್ಲಿ ಮುಂದುವರಿದಿತ್ತು. ಕೊನೆಗೆ ಇದೇ ದ್ವೇಷದಲ್ಲಿ ಹೊನ್ನಮ್ಮ ಅವರನ್ನು ಕಲ್ಲಿನಿಂದ ಜಜ್ಜಿ ಬರ್ಬರವಾಗಿ ಕೊಲೆ ಮಾಡಲಾಗಿತ್ತು. 2010ರಲ್ಲಿ ನಡೆದಿದ್ದ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ನ್ಯಾಯಾಲಯವು, ಬರೋಬ್ಬರಿ 14 ವರ್ಷಗಳ ನಂತರ ಮಹತ್ವದ ತೀರ್ಪು ಪ್ರಕಟಿಸಿದೆ.

    ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿಗಳೆಂದು ರಂಗನಾಥ, ಮಂಜುಳ, ತಿಮ್ಮರಾಜು, ರಾಜು (ದೇವರಾಜು), ಶ್ರೀನಿವಾಸ್, ಆನಂದ (ಆನಂದಸ್ವಾಮಿ), ವೆಂಕಟಸ್ವಾಮಿ, ವೆಂಕಟೇಶ್, ನಾಗರಾಜು, ರಾಜಪ್ಪ ಮೀಸೆ ಹನುಮಂತಯ್ಯ ಗಂಗಾಧರ (ಗಂಗಣ್ಣ), ನಂಜುಂಡಯ್ಯ (ಪರಿಶಿಷ್ಟ ಜಾತಿ), ಸತ್ಯಪ್ಪ– ಸತೀಶ (ಪರಿಶಿಷ್ಟ ಜಾತಿ), ಚಂದ್ರಶೇಖರ (ಚಂದ್ರಯ್ಯ, ರಂಗಯ್ಯ (ರಾಮಯ್ಯ, ಉಮೇಶ್, ಚನ್ನಮ ಮಂಜಣ್ಣ ಮಂಜು,) ಗುರುತಿಸಲಾಗಿದೆ.

    ಐಪಿಸಿ ಹಾಗೂ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ದೌರ್ಜನ್ಯ ತಡೆ ಕಾಯ್ದೆ ಅಡಿ ಶಿಕ್ಷೆಯ ಪ್ರಮಾಣವನ್ನು ನ್ಯಾಯಾಧೀಶರು ಪ್ರಕಟಿಸಲಿದ್ದಾರೆ.
    ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕು ಹಂದನಕೆರೆ ಪೊಲೀಸ್ ಠಾಣಾ ವ್ಯಾಪ್ತಿಯ ಗೋಪಾಲಪುರ ಗ್ರಾಮದಲ್ಲಿ 2010ರಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ಹೊನ್ನಮ್ಮ ಎಂಬುವವರ ಕೊಲೆ ನಡೆದಿತ್ತು.

    ಪ್ರಕರಣ ಒಂದೂವರೆ ದಶಕಗಳ ಕಾಲ ವಿಚಾರಣೆ ನಡೆದು, ಇದೀಗ ಅಪರಾಧ ಸಾಬೀತಾಗಿದೆ ಎಂದು ವಿಶೇಷ ಸರ್ಕಾರಿ ಅಭಿಯೋಜಕರಾದ ಬಿ.ಎಸ್.ಜ್ಯೋತಿ ಮಾಹಿತಿ ನೀಡಿದ್ದಾರೆ.

    ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 27 ಆರೋಪಿಗಳಲ್ಲಿ ಆರು ಮಂದಿ ಈಗಾಗಲೇ ಸಾವನ್ನಪ್ಪಿದ್ದು, ಉಳಿದ 21 ಮಂದಿ ಅಪರಾಧಿಗಳು ಎಂದು ಕೋರ್ಟ್ ಆದೇಶಿಸಿದೆ. ಶಿಕ್ಷೆಯ ಪ್ರಮಾಣವನ್ನು ಗುರುವಾರ ಪ್ರಕಟಿಸಲಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    ಡೆಂಗೀ ಹಾಗೂ ಚಿಕೂನ್ ಗುನ್ಯ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ವಹಿಸಿ: ಈ ಮಾಹಿತಿ ತಪ್ಪದೇ ಓದಿ!

    October 15, 2026

    ರುಡ್ ಸೆಟ್ ಸಂಸ್ಥೆ : ಫಾಸ್ಟ್ ಫುಡ್ ತಯಾರಿಕೆ ತರಬೇತಿಗೆ ಅರ್ಜಿ ಆಹ್ವಾನ

    October 15, 2026

    ಅತಿಥಿ ಶಿಕ್ಷಕರ ನೇಮಕ: ಅರ್ಜಿ ಆಹ್ವಾನ

    October 15, 2026

    Comments are closed.

    Our Picks

    ಜಗನ್ನಾಥನ ರಥದ ಚಕ್ರ ಮನೆಗೆ ತರಬೇಕಾ? ಖರೀದಿಸಲು ಎಷ್ಟು ಹಣ ಕೊಡಬೇಕು?

    October 14, 2026

    ನಿಮ್ಮ ಮೊಬೈಲ್ ರೀಚಾರ್ಜ್‌ನಿಂದ ಟೆಲಿಕಾಂ ಕಂಪನಿಗಳಿಗೆ ಎಷ್ಟು ಲಾಭ?

    October 14, 2026

    ದೆಹಲಿಯ ಬೀದಿಯಲ್ಲಿ ಕಾರ್ಯಕರ್ತರೊಂದಿಗೆ ಸರಳತೆಯ ಸಹಭೋಜನ: ಜನರ ನಡುವಿನ ನಾಯಕ ಬಿ.ಕೆ. ಹರಿಪ್ರಸಾದ್

    October 13, 2026

    ‘We’re Sorry’: ಸಿಜೆಪಿ ನಾಯಕ ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಸುದ್ದಿ ಮುಟ್ಟಿಸಿದ ಪೊಲೀಸ್; ವೈರಲ್ ವೀಡಿಯೊ

    October 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    Uncategorized

    ನವರಾತ್ರಿ ಸರಸ್ವತಿ ಪೂಜೆ ಯಾವಾಗ? ಆಯುಧ ಪೂಜೆ, ದಸರಾ ಶುಭ ಮುಹೂರ್ತದ ಸಂಪೂರ್ಣ ಮಾಹಿತಿ ಇಲ್ಲಿದೆ

    October 15, 2026

    ಶರನ್ನವರಾತ್ರಿ ಉತ್ಸವದ ಪ್ರಮುಖ ದಿನಗಳು ಸಮೀಪಿಸುತ್ತಿದ್ದು, ದುರ್ಗಾದೇವಿಯ ಆರಾಧನೆಗೆ ಭಕ್ತರು ಸಿದ್ಧತೆ ನಡೆಸುತ್ತಿದ್ದಾರೆ. ಈ ಬಾರಿಯ ನವರಾತ್ರಿಯಲ್ಲಿ ಸರಸ್ವತಿ ಪೂಜೆ,…

    ನವರಾತ್ರಿಯ ನವದುರ್ಗೆಯರ ಆರಾಧನೆ; ಪ್ರತಿದಿನದ ದೇವಿಯ ವಿಶೇಷತೆ ಏನು?

    October 15, 2026

    ಸ್ವೀಟ್ ಅಂಗಡಿ, ರೆಸ್ಟೋರೆಂಟ್, ಹೋಟೆಲ್ ಗಳ ಮೇಲೆ ದಾಳಿ: ಸ್ವಚ್ಛತೆ ಇಲ್ಲ, ಹಳೆ ತರಕಾರಿ ಬಳಕೆ ಪತ್ತೆ: ನೋಟಿಸ್

    October 15, 2026

    ಡೆಂಗೀ ಹಾಗೂ ಚಿಕೂನ್ ಗುನ್ಯ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ವಹಿಸಿ: ಈ ಮಾಹಿತಿ ತಪ್ಪದೇ ಓದಿ!

    October 15, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.