ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್ನ A1 ಆರೋಪಿ ಹಾಗೂ ನಟ ದರ್ಶನ್ ಆಪ್ತೆ ಪವಿತ್ರಾಗೌಡ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ. ಹತ್ಯೆಯಾದ ರೇಣುಕಾಸ್ವಾಮಿ ಪವಿತ್ರಾಗೌಡಗೆ ಅಶ್ಲೀಲ ಸಂದೇಶ ಕಳುಹಿಸಿದ್ದ ಎಂಬ ಕಾರಣಕ್ಕೆ ರೇಣುಕಾಸ್ವಾಮಿಯನ್ನು ಸಂಚು ರೂಪಿಸಿ ಚಿತ್ರದುರ್ಗದಿಂದ ಬೆಂಗಳೂರಿನ ಪಟ್ಟಣಗೆರೆ ಶೆಡ್ಗೆ ಕರೆತಂದು ಕೊಲೆ ಮಾಡಿರುವ ಪ್ರಕರಣ ಇದಾಗಿದೆ.
ಈಗಾಗಲೇ ಕೊಲೆ ಪ್ರಕರಣದ ತನಿಖೆಯು ಮುಕ್ತಾಯ ಹಂತಕ್ಕೆ ಬಂದಿದ್ದು, ಸದ್ಯದಲ್ಲೇ ಚಾರ್ಜ್ಶೀಟ್ ಸಲ್ಲಿಕೆ ಮಾಡುವುದಾಗಿ ಇತ್ತೀಚೆಗೆ ಪೊಲೀಸ್ ಕಮಿಷನರ್ ದಯಾನಂದ್ ಅವರು ಹೇಳಿದ್ದರು.ಚಾರ್ಜ್ಶೀಟ್ ಸಲ್ಲಿಕೆ ಹೊತ್ತಲ್ಲಿ ಪವಿತ್ರಾಗೌಡ ಜಾಮೀನಿಗಾಗಿ ಕೋರ್ಟ್ಗೆ ಮೊರೆ ಹೋಗಿದ್ದಾರೆ.
ಕೊಲೆ ಪ್ರಕರಣದ ಆರೋಪದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುರುವ ಆರೋಪಿ ಪವಿತ್ರಾಗೌಡ 72 ದಿನಗಳ ಬಳಿಕ ಹಿರಿಯ ವಕೀಲೆ ರೇನಿ ಸೆಬಾಸ್ಟಿಯನ್ ಅವರ ಮೂಲಕ ಸಿಸಿಹೆಚ್ 57ನೇ ಕೋರ್ಟ್ನಲ್ಲಿ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದಾರೆ. ಕೊಲೆ ಪ್ರಕರಣದಲ್ಲಿ ಒಟ್ಟು 17 ಆರೋಪಿಗಳು ಜೈಲು ಸೇರಿದ್ದು, ಆ ಪೈಕಿ ದರ್ಶನ್ A2 ಆರೋಪಿಯಾಗಿದ್ದಾರೆ.
ಕೊಲೆ ಪ್ರಕರಣದ ಆರೋಪದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ 7ನೇ ಆರೋಪಿ ಅನುಕುಮಾರ್ ಅಲಿಯಾಸ್ ಅನು ಸಹ ಜಾಮೀನು ಕೋರಿ ಬೆಂಗಳೂರಿನ 57ನೇ ಸೆಷನ್ಸ್ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾನೆ. ಅನುಕುಮಾರ್ ಸಲ್ಲಿಸಿರುವ ಈ ಜಾಮೀನು ಅರ್ಜಿ ವಿಚಾರಣೆಯು ನಾಳೆ ಕೋರ್ಟ್ ನಡೆಸಲಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q