ಮಹಾರಾಷ್ಟ್ರ ಸರ್ಕಾರವು ತನ್ನ ಬಜೆಟ್ ನಲ್ಲಿ ರಾಜ್ಯದ ಜನರಿಗೆ ಹಲವು ಬಂಪರ್ ಘೋಷಣೆ ಮಾಡಿದೆ. ಇದರಲ್ಲಿ ಮುಖ್ಯವಾಗಿ ಪ್ರತೀ ಮನೆಗೂ ವರ್ಷಕ್ಕೆ 3 ಉಚಿತ ಸಿಲಿಂಡರ್ ಕೊಡುವುದಾಗಿ ಹೇಳಿದೆ.
ಲೋಕಸಭಾ ಚುನಾವಣೆಯಲ್ಲಿ ಮಹಾರಾಷ್ಟ್ರದಲ್ಲಿ ಭಾರೀ ಹಿನ್ನಡೆ ಕಂಡಿದ್ದ ಎನ್ ಡಿಎ ಮೈತ್ರಿಕೂಟ ಸರ್ಕಾರ ಈ ಬಾರಿಯ ರಾಜ್ಯ ಬಜೆಟ್ ನಲ್ಲಿ ಜನಪ್ರಿಯ ಸ್ಕೀಮ್ ಗಳಿಗೆ ಶರಣಾಗಿದೆ. ಇದರಲ್ಲಿ ಹಲವು ಉಚಿತ ಕೊಡುಗೆಗಳನ್ನು ನೀಡಿದ್ದಾರೆ.
ಕರ್ನಾಟಕದ ಗೃಹಲಕ್ಷ್ಮೀ ಯೋಜನೆ ಮಾದರಿಯಲ್ಲಿ ಮಹಾರಾಷ್ಟ್ರದಲ್ಲೂ ಮಹಿಳೆಯರಿಗೆ ಸರ್ಕಾರ ಮಾಸಿಕ ಸಹಾಯಧನ ಒದಗಿಸಲು ಘೋಷಿಸಿದೆ. 21 ವರ್ಷದಿಂದ 60 ವರ್ಷದವರೆಗಿನ ವಯಸ್ಸಿನ ಮಹಿಳೆಯರಿಗೆ ಮಾಸಿಕವಾಗಿ 1,500 ರೂ ನೀಡುವುದಾಗಿ ಸರ್ಕಾರ ಘೋಷಿಸಿದೆ.
ಮಹಾರಾಷ್ಟ್ರದ ಹತ್ತಿ ಮತ್ತು ಸೋಯಾಬೀನ್ ಬೆಳೆಗಳಿಗೆ ಪ್ರತೀ ಹೆಕ್ಟೇರ್ ಗೆ 5,000 ರೂ. ಬೋನಸ್ ಹಣವನ್ನು ರೈತರಿಗೆ ನೀಡಲಾಗುತ್ತದೆ. ಹಾಲು ಉತ್ಪಾದಕ ರೈತರಿಗೆ ಜುಲೈ 1ರ ಬಳಿಕ ಪ್ರತೀ ಲೀಟರ್ ಹಾಲಿಗೆ 5 ರೂ ಹೆಚ್ಚುವರಿ ಬೋನಸ್ ಕೊಡಲಾಗುತ್ತದೆ. ಪ್ರಾಣಿಗಳ ದಾಳಿಯಿಂದ ಮೃತ ಪಡುವ ವ್ಯಕ್ತಿಗಳ ಸಂಬಂಧಿಕರಿಗೆ ನೀಡಲಾಗುವ ಪರಿಹಾರ ಹಣವನ್ನು 20 ಲಕ್ಷ ರೂನಿಂದ 25 ಲಕ್ಷ ರೂ.ಗೆ ಏರಿಸಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA