ಬೆಂಗಳೂರು: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ರಮೇಶ್ ಜಾರಕಿಹೊಳಿ, ಶ್ರೀರಾಮುಲು ನಂತರ ಇದೀಗ ಹಾಲಿ ಸಂಸದ ಡಾ. ಕೆ. ಸುಧಾಕರ್ ವಿಜಯೇಂದ್ರ ವಿರುದ್ಧ ಬಹಿರಂಗವಾಗಿ ಆಕ್ರೋಶ ಹೊರ ಹಾಕಿದ್ದಾರೆ.
ಚಿಕ್ಕಬಳ್ಳಾಪುರ ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಸಂದೀಪ್ ಅವರನ್ನು ಆಯ್ಕೆ ಮಾಡಿರುವುದರಿಂದ ಸಿಡಿದೆದ್ದಿರುವ ಸುಧಾಕರ್ ಇಂದು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಬಹಿರಂಗವಾಗಿಯೇ ವಿಜಯೇಂದ್ರ ವಿರುದ್ಧ ವಾಗ್ದಾಳಿ ನಡೆಸಿದರು.
ಜಿಲ್ಲಾಧ್ಯಕ್ಷರ ನೇಮಕದಲ್ಲಿ ವಿಜಯೇಂದ್ರ ಅವರು ಏಕಪಕ್ಷೀಯ ನಿರ್ಧಾರ ಕೈಗೊಂಡಿದ್ದಾರೆ ಎಂದು ಆರೋಪಿಸಿದ ಸುಧಾಕರ್, ರಾಜ್ಯಾಧ್ಯಕ್ಷ ಸ್ಥಾನದಿಂದ ವಿಜಯೇಂದ್ರ ಅವರನ್ನು ಕೆಳಗಿಳಿಸಬೇಕು ಎಂದು ಆಗ್ರಹಿಸಿದ್ದಾರೆ.
ನಿಮ್ಮ ನಾಯಕತ್ವದಲ್ಲಿ ಕೋಲಾರ, ಚಿಕ್ಕಬಳ್ಳಾಪುರದಲ್ಲಿ ಒಂದು ಸೀಟು ಗೆಲ್ಲಿ ನೋಡೋಣ ಎಂದು ಕೆ. ಸುಧಾಕರ್ ಅವರು ವಿಜಯೇಂದ್ರ ಅವರಿಗೆ ಬಹಿರಂಗ ಸವಾಲು ಹಾಕಿದ್ದಾರೆ. ತಮಗೆ ಬೇಕಾದವರಿಗೆ ಅಧ್ಯಕ್ಷ, ರಾಜ್ಯ ಕಾರ್ಯದರ್ಶಿ, ರಾಜ್ಯ ಪ್ರಧಾನ ಕಾರ್ಯದರ್ಶಿ, ರಾಜ್ಯ ಉಪಾಧ್ಯಕ್ಷರನ್ನು ಮಾಡಿಕೊಂಡಿದ್ದಾರೆ. ಇವತ್ತಿನ ರಾಜ್ಯಾಧ್ಯಕ್ಷ ಮಿಸ್ಟರ್ ಬಿ.ವೈ. ವಿಜಯೇಂದ್ರ ಅವರ ಧೋರಣೆ ಬೇಸರ ತಂದಿದೆ ಎಂದು ಅಸಮಾಧಾನ ಹೊರಹಾಕಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4