ಬೆಂಗಳೂರು: ಗ್ಯಾರಂಟಿ ಯೋಜನೆ ಬಳಿಕ ವ್ಯಾಪಾರ ವಹಿವಾಟು ಗರಿಗೆದರಿದೆ ಎಂದು ಸಿಎಂ ಸಿದ್ದರಾಮಯ್ಯ ತಮ್ಮ ಸಾಮಾಜಿಕ ಜಾಲತಾಣಗಳ ಮೂಲಕ ತಿಳಿಸಿ ಎಂದಿದ್ದಾರೆ.
ಮಂದಗತಿಯಲ್ಲಿ ಸಾಗುತ್ತಿದ್ದ ರಾಜ್ಯದ ವ್ಯಾಪಾರ ವಹಿವಾಟು ನಮ್ಮ ಗ್ಯಾರಂಟಿ ಯೋಜನೆಗಳ ಜಾರಿ ನಂತರ ಗರಿಗೆದರಿದೆ. ಈ ಕಾರಣಕ್ಕಾಗಿ ಸೆಪ್ಟೆಂಬರ್ ತಿಂಗಳ ಸರಕು ಮತ್ತು ಸೇವಾ ತೆರಿಗೆ ( ಜಿ.ಎಸ್.ಟಿ ) ಸಂಗ್ರಹದಲ್ಲಿ ಭಾರೀ ಹೆಚ್ಚಳವಾಗಿದ್ದು, ಕಳೆದ ವರ್ಷದ ಸೆಪ್ಟೆಂಬರ್ ತಿಂಗಳ ಸಂಗ್ರಹಕ್ಕಿಂತ ಶೇ. 20 ಪ್ರಗತಿ ಕಂಡಿದೆ. ಸೆಪ್ಟೆಂಬರ್ ನಲ್ಲಿ ರೂ. 11,693 ಕೋಟಿ ಜಿಎಸ್ ಟಿ ಸಂಗ್ರಹವಾಗಿದ್ದು, ಇದು ರಾಜ್ಯದ ಆರ್ಥಿಕ ಬೆಳವಣಿಗೆಯ ದಿಕ್ಸೂಚಿ ಎಂದು ಭಾವಿಸಿರುವುದಾಗಿ ಸಿದ್ದರಾಮಯ್ಯ ಹೇಳಿದ್ದಾರೆ.
ನಾನು ಈ ಹಿಂದೆ ಹಲವು ಬಾರಿ ಹೇಳಿದಂತೆ, ”ಬಡವರ ಜೀಬಿಗೆ ಹಣ ಹಾಕಿದರೆ ಅವರಲ್ಲಿ ಕೊಳ್ಳುವ ಸಾಮರ್ಥ್ಯ ಬರುತ್ತದೆ, ಇದರಿಂದ ವ್ಯಾಪಾರ ವಹಿವಾಟು ಹೆಚ್ಚಾಗುತ್ತದೆ” ಎಂದು. ಕಳೆದ ತಿಂಗಳ ಜಿಎಸ್‌ಟಿ ಸಂಗ್ರಹ ನನ್ನ ಮಾತನ್ನು ಸಾಬೀತು ಮಾಡಿದೆ ಎಂದಿದ್ದಾರೆ.


