ತಿಪಟೂರು: ನಗರದ ಹಾಸನ ವೃತ್ತದ ನಂದಿನಿ ಹಾಲಿನ ಮಳಿಗೆಯ ಆವರಣದಲ್ಲಿ ತಾಲೂಕು ಜಯಕರ್ನಾಟಕ ಜನಪರ ವೇದಿಕೆ ವತಿಯಿಂದ ಕನ್ನಡ ನಾಡಿನ ಕವಿಗಳು, ನಾಟಕಕಾರರು, ಪ್ರಗತಿಪರ ಹೋರಾಟಗಾರರಾದ ಚಂದ್ರಶೇಖರ್ ಪಾಟೀಲ್ ( ಚಂಪಾ ) ರವರಿಗೆ ನುಡಿನಮನ ಮತ್ತು ಶ್ರದ್ಧಾಂಜಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ನಗರಸಭಾ ಸದಸ್ಯ ಮಹೇಶ್, ಜಯಕರ್ನಾಟಕ ಜನಪರ ವೇದಿಕೆ ನಗರ ಗೌರವಾಧ್ಯಕ್ಷ ಡಾ.ಭಾಸ್ಕರ್ ಮತ್ತು ತಾಲ್ಲೂಕು ಅಧ್ಯಕ್ಷ ಬಿ.ಟಿ.ಕುಮಾರ್ ಮಾತನಾಡಿದರು. ಕಸಾಪ ಕಾರ್ಯದರ್ಶಿ ಮಂಜುನಾಥ್, ಹಿರಿಯ ಮುಖಂಡ ರಾಜಣ್ಣ, ವಿಶ್ವನಾಥ್ ನಿವೃತ್ತ ನೌಕರ ಜಯದೇವಪ್ಪ ಮತ್ತು ತುರುವೇಕೆರೆ ಪತ್ರಕರ್ತ ಪಾರ್ಥಸಾರಥಿ ಸೇರಿದಂತೆ ಸಂಘಟನೆಯ ಪದಾಧಿಕಾರಿಗಳು ಹಾಜರಿದ್ದರು
ವರದಿ: ಆನಂದ್ ತಿಪಟೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy