ಉತ್ತರ ಪ್ರದೇಶ ; ಮೂರು ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವ ಕೇಂದ್ರ ಸರ್ಕಾರದ ನಿರ್ಧಾರವನ್ನು ರಾಜಸ್ಥಾನ ರಾಜ್ಯಪಾಲ ಕಲ್ ರಾಜ್ ಮಿಶ್ರಾ ಸ್ವಾಗತಿಸಿದ್ದಾರೆ.
ರೈತರ ದೀರ್ಘಕಾಲದ ಪ್ರತಿಭಟನೆಯ ಫಲವಾಗಿ ಮೂರು ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಬೆಳಿಗ್ಗೆ ಘೋಷಿಸಿದ್ದರು. ಆದರೆ ಅಗತ್ಯವಿದ್ದರೆ ಕೃಷಿ ಕಾಯ್ದೆಗಳನ್ನು ಮರು ಜಾರಿಗೊಳಿಸಬಹುದು ಎಂದು ಕಲ್ ರಾಜ್ ಮಿಶ್ರಾ ಹೇಳಿರುವುದಾಗಿ ‘ಎಎನ್ ಐ’ ಸುದ್ದಿಸಂಸ್ಥೆ ವರದಿ ಮಾಡಿದೆ.
‘ಕೃಷಿ ಕಾಯ್ದೆಗಳ ಬಗ್ಗೆ ರೈತರಿಗೆ ಮನವರಿಕೆ ಮಾಡಿಕೊಡಲು ಕೇಂದ್ರ ಸರ್ಕಾರ ಪ್ರಯತ್ನಿಸಿದ್ದು, ಕೃಷಿ ಕಾಯ್ದೆಗಳ ಪ್ರಯೋಜನಗಳನ್ನು ರೈತರು ಅರ್ಥಮಾಡಿಕೊಳ್ಳಬಹುದು ಎಂದು ಭಾವಿಸಿತ್ತು. ಆದರೆ, ರೈತರು ಪ್ರತಿಭಟನೆಯನ್ನು ಮುಂದುವರಿಸಿದ್ದರು ಎಂದು ಅವರು ಹೇಳಿದ್ದಾರೆ.
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700