ಬೆಂಗಳೂರು: ಒಂದನೇ ತರಗತಿ ಶಾಲಾ ಪ್ರವೇಶ ವಯೋಮಿತಿಯನ್ನು ರಾಜ್ಯ ಶಿಕ್ಷಣ ನೀತಿ (SEP)ಆಯೋಗದ ಶಿಫಾರಸಿನಂತೆ ನಿಗದಿಪಡಿಸಲಾಗುವುದು ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಶನಿವಾರ ಹೇಳಿದ್ದಾರೆ.
1ನೇ ತರಗತಿಗೆ ಪ್ರವೇಶ ಪಡೆಯುವ ಮಕ್ಕಳಿಗೆ ವಯೋಮಿತಿ ಸಡಿಲಿಕೆ ನೀಡುವಂತೆ ಹಲವು ಪೋಷಕರ ಮನವಿಯ ಹಿನ್ನೆಲೆಯಲ್ಲಿ ಸುದ್ದಿಗಾರರ ಪ್ರಶ್ನೆಗಳಿಗೆ ಅವರು ಉತ್ತರಿಸುತ್ತಿದ್ದರು.
ಇದು ಹಿಂದಿನ ಸರ್ಕಾರ ಮಾಡಿದ ತಪ್ಪಾಗಿದೆ. ಅವರು ರಾಷ್ಟ್ರೀಯ ಶಿಕ್ಷಣ ನೀತಿ ಮಾರ್ಗಸೂಚಿ ರೂಪಿಸಿದ್ದಾರೆ. ನಾವು ಅದರ ವಿರುದ್ಧವಾಗಿದ್ದು, ಈ ಸಮಸ್ಯೆಯನ್ನು ಬಗೆಹರಿಸಲು ರಾಜ್ಯ ಶಿಕ್ಷಣ ನೀತಿ ಆಯೋಗಕ್ಕೆ ಮನವಿ ಮಾಡಿದ್ದೇವೆ ಎಂದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4