ಬೆಂಗಳೂರು ಬಿಬಿಎಂಪಿ ವ್ಯಾಪ್ತಿಯಲ್ಲಿ ಕಾಲರಾ ಕಾಯಿಲೆ ಉಲ್ಬಣಗೊಂಡಿದೆ. ಒಂದೆರಡು ಪ್ರಕರಣ ದಾಖಲಾಗುತ್ತದಂತೆ ಶಂಕಿತರ ಮಾದರಿ ಪರೀಕ್ಷೆಗೆ ಮಾಡಲಾಗುತ್ತಿದೆ. ಆಸ್ಪತ್ರೆ ದಾಖಲಾಗುವವರಿ ಸಂಖ್ಯೆ ಹೆಚ್ಚುತ್ತಿದ್ದಂತೆ ಬಿಬಿಎಂಪಿ ಹೈ ಅಲರ್ಟ್ ಆಗಿದೆ.
ಬಿಬಿಎಂಪಿ ಆರೋಗ್ಯ ತಂಡದಿಂದ ಶಂಕಿತ ಮಹಿಳೆಯು ವಾಸವಾಗಿರುವ ಸ್ಥಳದಿಂದ ಸುತ್ತಲಿನ 165 ಮನೆಗಳಿಗೆ ಭೇಟಿ ನೀಡಿ ಸಮೀಕ್ಷೆ ನಡೆಸಿದೆ. ರೋಗ ಹರಡುವ ವಿಧಾನಗಳು, ಶುದ್ಧ ನೀರಿನ ಬಳಕೆ ನೈರ್ಮಲ್ಯದ ಬಗ್ಗೆ ಅರಿವು ಮೂಡಿಸಿ ಆರೋಗ್ಯ ಶಿಕ್ಷಣ ನೀಡಲಾಗಿದೆ.
ಕಾಲರಾ ಮುನ್ನೆಚ್ಚರಿಕಾ ಕ್ರಮದ ಬಗ್ಗೆ ಮಾರ್ಗಸೂಚಿ ಬಿಡುಗಡೆ:
ಬಿಸಿಲಿನ ತಾಪ, ಬಿಸಿಗಾಳಿ, ಕಾಲರಾ ಬಗ್ಗೆ ಕಟ್ಟೆಚ್ಚರ ವಹಿಸಲು ಸುತ್ತೋಲೆ ಹೊರಡಿಸಿದ್ದು, ಸಾಂಕ್ರಾಮಿಕ ರೋಗಿಗಳ ಡೇಟಾ ನೀಡಲು ಖಾಸಗಿ ಆಸ್ಪತ್ರೆಗಳಿಗೆ ಸೂಚನೆ ನೀಡಲಾಗಿದೆ ಎಂದು ಆರೋಗ್ಯ ಇಲಾಖೆ ಆಯುಕ್ತ ರಂದೀಪ್ ತಿಳಿಸಿದರು.
ಕಲಬುರಗಿ, ಬಾಗಲಕೋಟೆ ಜಿಲ್ಲೆಯಲ್ಲಿ ತಲಾ ಇಬ್ಬರು ಮೃತಪಟ್ಟಿದ್ದು, ಬಿಸಿಲಿನ ತಾಪದಿಂದ ಮೃತಪಟ್ಟಿಲ್ಲ ಎಂಬ ಮಾಹಿತಿ ಬಂದಿದೆ. ಇತರೆ ರೋಗಗಳಿಂದ ಬಳಲುತ್ತಿದ್ದ ಓರ್ವ ವ್ಯಕ್ತಿ ಮೃತಪಟ್ಟಿದ್ದಾನೆ. ಬಿಸಿಲಿ ತಾಪವೂ ಇದಕ್ಕೆ ಕಾರಣ ಅನ್ನೋ ಬಗ್ಗೆ ಪರೀಕ್ಷೆ ನಡೆಯುತ್ತಿದೆ ಎಂದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296