ತುಮಕೂರು: ಅಗ್ನಿಪಥ ಯೋಜನೆಯನ್ನು ವಿರೋಧಿಸಿ ತುಮಕೂರು ಜಿಲ್ಲಾಧಿಕಾರಿ ಕಚೇರಿ ಮುಂದೆ ಕಾಂಗ್ರೆಸ್ ಕಾರ್ಯಕರ್ತರು ಸೋಮವಾರ ಪ್ರತಿಭಟನೆ ನಡೆಸಿದ್ದಾರೆ.
ಅಗ್ನಿಪಥ ಯೋಜನೆಯ ಹೆಸರಿನಲ್ಲಿ ಸೈನಿಕರಿಗೆ ದ್ರೋಹ ಮಾಡುತ್ತಿರುವ ಬಿಜೆಪಿಗೆ ಧಿಕ್ಕಾರ, ಬಿಜೆಪಿ ಸರ್ಕಾರ ತೊಲಗಲಿ ಎಂದು ಕಾಂಗ್ರೆಸ್ ಮುಖಂಡರು ಘೋಷಣೆಗಳನ್ನು ಕೂಗಿ ಪ್ರತಿಭಟಿಸಿದ್ದಾರೆ.
ಉದ್ಯೋಗದ ಹೆಸರಿನಲ್ಲಿ ಬಿಜೆಪಿ ಸರ್ಕಾರ ಯುವಕರನ್ನು ಬೀದಿ ಪಾಲು ಮಾಡಲಾಗುತ್ತಿದೆ. ಅಧಿಕಾರ ಹಿಡಿಯುವ ಸಲುವಾಗಿ ವರ್ಷಕ್ಕೆ 2 ಕೋಟಿ ಉದ್ಯೋಗ ನೀಡುತ್ತೇನೆ ಎಂದವರು ಮತ್ತೆ ಈ ಬಗ್ಗೆ ಮಾತನಾಡಲಿಲ್ಲ. ಅವರ ಪ್ರಕಾರ ಇದುವರೆಗೆ 16 ಕೋಟಿ ಉದ್ಯೋಗ ನೀಡಬೇಕಿತ್ತು. ಆದರೆ, ಸುಳ್ಳು ಹೇಳುವುದರಲ್ಲಿ ಕೇಂದ್ರ ಸರ್ಕಾರ ಮುಳುಗಿದೆ ಕಾಂಗ್ರೆಸ್ ಕಾರ್ಯಕರ್ತರು ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸೇನೆಯಲ್ಲಿ ಶಾಶ್ವತವಾದ ಸ್ಥಾನ ನೀಡಲಿ. ಅಗ್ನಿಪಥ ಬಿಜೆಪಿ ಕಾರ್ಯಾಲಯದಲ್ಲಿಯೇ ಇರಲಿ. ಪ್ರತಿಯೊಬ್ಬರು ಯೋಜನೆ ವಿರೋಧಿಸುತ್ತಿದ್ದಾರೆ. ರೈತರ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆದ ರೀತಿಯಲ್ಲಿ ಅಗ್ನಿಪಥ ಹಿಂದಕ್ಕೆ ಪಡೆಯಬೇಕು. ಸರ್ಕಾರ ಸ್ಪಂದಿಸದಿದ್ದರೆ ಮುಂದಿನ ದಿನಗಳಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB