ಸೇನಾ ನೇಮಕಾತಿಗೆ ಕೇಂದ್ರ ರೂಪಿಸಿರುವ ಅಗ್ನಿಪಥ್ ಯೋಜನೆ ವಿರೋಧಿಸಿ ಕರೆನೀಡಿದ್ದ ಬೆಳಗಾವಿ ಬಂದ್ ಸಂಪೂರ್ಣ ವಿಫಲವಾಗಿದೆ. ಯಾವುದೇ ಸಂಘಟನೆ ಬೆಳಗಾವಿ ಬಂದ್‌ಗೆ ಕರೆ ನೀಡಿರುವುದು ದೃಢಪಟ್ಟಿಲ್ಲ. ಆದರೂ ಇಂದು ಬಂದ್ ಆಚರಿಸಲಾಗುವುದು ಎಂದು ಸಾಮಾಜಿಕ ಜಾಲತಾಣಗಳಲ್ಲಿ ಸಂದೇಶ ಹರಿದಾಡಿದ ಹಿನ್ನೆಲೆಯಲ್ಲಿ ಪೊಲೀಸರು ಮುನ್ನೆಚ್ಚರಿಕೆ ವಹಿಸಿ ಬಿಗಿಕ್ರಮಗಳನ್ನು ಕೈಗೊಂಡಿದ್ದರು.
ಬೆಳಗಾವಿಯಲ್ಲಿ ಜನಜೀವನ ಎಂದಿನಂತಿತ್ತು. ಶಾಲಾ – ಕಾಲೇಜುಗಳು, ಬ್ಯಾಂಕ್‌ಗಳು, ಸರ್ಕಾರಿ ಕಚೇರಿಗಳು ಎಂದಿನಂತೆ ಕಾರ್ಯ ನಿರ್ವಹಿಸಿದವು. ಸಂಚಾರಿ ವ್ಯವಸ್ಥೆ ಸುಗಮವಾಗಿತ್ತು. ವ್ಯಾಪಾರ, ವಹಿವಾಟು ಮಾಮೂಲಿನಂತಿತ್ತು. ಆದರೆ ಕೆಲವ್ಯಾಪಾರಿಗಳು ಸ್ವಯಂ ಪ್ರೇರಣೆಯಿಂದ ಅಂಗಡಿಗಳನ್ನು ಮುಚ್ಚಿದ್ದು ಕಂಡುಬಂತು.
ಬೆಳಗಾವಿ ಬಂದ್ ಹಿನ್ನೆಲೆಯಲ್ಲಿ ಕ್ಷಿಪ್ರಕಾರ್ಯ ಪಡೆ, ನಗರ ಪೊಲೀಸರು ಪ್ರಮುಖ ವೃತ್ತಗಳಲ್ಲಿ ಆಯಕಟ್ಟಿನ ಸ್ಥಳಗಳಲ್ಲಿ ಕಟ್ಟೆಚ್ಚರ ವಹಿಸಿದ್ದರು.
ಬೆಳಗಾವಿಯಲ್ಲೆ ಬಂದ್ ಅಥವಾ ಪ್ರತಿಭಟನೆ ಮಾಡುವ ಬಗ್ಗೆ ಯಾರೂ ಅನುಮತಿ ಪಡೆದಿಲ್ಲ. ಸಾಮಾಜಿಕ ಜಾಲತಾಣಗಳಲ್ಲಿ ವಿಷಯ ಹರಿದಾಡುತ್ತಿದೆ. ಅಗತ್ಯ ಎಲ್ಲ ಸಿದ್ಧತೆ ಮಾಡಿಕೊಂಡಿದ್ದೇವೆ. ಕೆಎಸ್ ಆರ್ ಪಿ ಹಾಗೂ ಕ್ಷಿಪ್ರಕಾರ್ಯ ಪಡೆಯ ಪಹರೆ ನಡೆದಿದೆ. ಬಸ್ ನಿಲ್ದಾಣ, ರೈಲು ನಿಲ್ದಾಣ, ಪ್ರಮುಖ ವೃತ್ತಗಳಲ್ಲಿ ಡ್ರೋನ್ ಕ್ಯಾಮೆರಾ ಬಳಸಿ ಸ್ಥಿತಿಗತಿ ಮೇಲೆ ಕಣ್ಣಿಡಲಾಗಿದೆ. ಯಾರಾದರೂ ಕಾನೂನು ಉಲ್ಲಂಘಿಸಿದ್ದು ಕಂಡುಬಂದರೆ, ಸಾರ್ವಜನಿಕ ಆಸ್ತಿಗೆ ಹಾನಿ ಮಾಡಿದರೆ ಸ್ಥಳದಲ್ಲೇ ಬಂಧಿಸಲಾಗುವುದು” ಎಂದು ನಗರ ಪೊಲೀಸ್ ಕಮಿಷನ್‌ರ್ ಡಾ.ಬೋರಲಿಂಗಯ್ಯ ತಿಳಿಸಿದರು.
ವರದಿ ಆಂಟೋನಿ ಬೇಗೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB


