ತುಮಕೂರು: ವೆಟರ್ನರಿ, ಬಿಎಸ್ಸಿ ಕೃಷಿ, ಬಿಎಸ್ಸಿ ತೋಟಗಾರಿಕೆ ಸೇರಿದಂತೆ ವಿವಿಧ 12 ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ರೈತರ ಮಕ್ಕಳಿಗೆ ನೀಡಲಾಗುವ 50% ಮೀಸಲಾತಿಯನ್ನು ಪಡೆಯಲು ನೆರವಾಗುವ ನಿಟ್ಟಿನಲ್ಲಿ, ತುಮಕೂರಿನಲ್ಲಿ ಉಚಿತ ಕೃಷಿ ಪ್ರಾಯೋಗಿಕ ತರಬೇತಿ ಕಾರ್ಯಾಗಾರವನ್ನು ಆಯೋಜಿಸಲಾಗಿದೆ.
ರಾಜ್ಯದ ಕೃಷಿ ವಿಶ್ವವಿದ್ಯಾಲಯಗಳಲ್ಲಿ ರೈತರ ಕೋಟಾದಡಿ ಸೀಟು ಪಡೆಯಲು KCET ಪರೀಕ್ಷೆಯ ಜೊತೆಗೆ ಕೃಷಿ ವಿಶ್ವವಿದ್ಯಾಲಯಗಳು ನಡೆಸುವ ಪ್ರಾಯೋಗಿಕ ಪರೀಕ್ಷೆಯಲ್ಲಿ (Practical Exam) ಉತ್ತೀರ್ಣರಾಗುವುದು ಕಡ್ಡಾಯವಾಗಿದೆ. ಈ ಹಿನ್ನೆಲೆಯಲ್ಲಿ, ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಲು Viksit47 ಅಕಾಡೆಮಿ ವತಿಯಿಂದ ಈ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಕಾರ್ಯಾಗಾರದ ವಿವರಗಳು:
- ದಿನಾಂಕ: ಏಪ್ರಿಲ್ 19, ಭಾನುವಾರ
- ಸಮಯ: ಬೆಳಿಗ್ಗೆ 10:00 ಗಂಟೆಗೆ
- ಸ್ಥಳ: ಬಾಪೂಜಿ ಪಿಯು ಕಾಲೇಜು, ರವೀಂದ್ರ ಕಲಾನಿಕೇತನ, ಆರ್.ಟಿ. ನಗರ, ತುಮಕೂರು.
ಈ ಕಾರ್ಯಾಗಾರದಲ್ಲಿ ಕೃಷಿ ಪ್ರಾಯೋಗಿಕ ಪರೀಕ್ಷೆಯ ಸ್ವರೂಪ, ಪರೀಕ್ಷೆಯಲ್ಲಿ ಕೇಳಲಾಗುವ ಪ್ರಶ್ನೆಗಳು ಹಾಗೂ ಸಿದ್ಧತೆಯ ಕುರಿತು ಸಂಪೂರ್ಣ ತರಬೇತಿಯನ್ನು ನೀಡಲಾಗುತ್ತದೆ. ದ್ವಿತೀಯ ಪಿಯುಸಿ ಮುಗಿಸಿ ಪ್ರಸಕ್ತ ಸಾಲಿನ KCET ಪರೀಕ್ಷೆಗೆ ಸಿದ್ಧತೆ ನಡೆಸುತ್ತಿರುವ ತುಮಕೂರು ಹಾಗೂ ಅಕ್ಕಪಕ್ಕದ ಜಿಲ್ಲೆಗಳ ವಿದ್ಯಾರ್ಥಿಗಳು ಇದರ ಸದುಪಯೋಗ ಪಡಿಸಿಕೊಳ್ಳಬಹುದಾಗಿದೆ.
ನೋಂದಣಿ ಮಾಹಿತಿ:
ಆಸಕ್ತ ವಿದ್ಯಾರ್ಥಿಗಳು ಕಾರ್ಯಾಗಾರದಲ್ಲಿ ಭಾಗವಹಿಸಲು ಈ ಕೂಡಲೇ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಮತ್ತು ನೋಂದಣಿಗಾಗಿ 8217413646 ಸಂಖ್ಯೆಗೆ ಕರೆ ಮಾಡಬಹುದು.
“ರೈತರ ಮಕ್ಕಳಿಗೆ ಸಿಗುವ ಈ ಮೀಸಲಾತಿಯ ಪ್ರಯೋಜನವನ್ನು ಅರ್ಹ ವಿದ್ಯಾರ್ಥಿಗಳು ಪಡೆದುಕೊಳ್ಳಬೇಕು. ಕಾಲೇಜುಗಳ ಆಡಳಿತ ಮಂಡಳಿಯವರು ಸಹ ತಮ್ಮ ವಿದ್ಯಾರ್ಥಿಗಳನ್ನು ಈ ಕಾರ್ಯಾಗಾರಕ್ಕೆ ಕಳುಹಿಸಿಕೊಡುವ ಮೂಲಕ ಪ್ರೋತ್ಸಾಹಿಸಬೇಕು” ಎಂದು ವಿಕಸಿತ್47 ಅಕಾಡೆಮಿಯ ಮುಖ್ಯಸ್ಥರಾದ ತೇಜಸ್ ಹೆಚ್.ಎನ್. ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


