ತುಮಕೂರು: ಆಹಾರ ಪದಾರ್ಥಗಳ ಮೇಲೆ ಜಿ.ಎಸ್.ಟಿ. ವಿಧಿಸುತ್ತಿರುವುದನ್ನು ಖಂಡಿಸಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ರೈಸ್ ಮಿಲ್ ಮಾಲೀಕರು ವರ್ತಕರು ತುಮಕೂರು ಚೇಂಬರ್ ಆಫ್ ಕಾಮರ್ಸ್ ವತಿಯಿಂದ ಪ್ರತಿಭಟನೆ ನಡೆಸಿದರು.
ರೈಸ್ ಮಿಲ್ ಮಾಲೀಕರ ಸಂಘದ ಅಧ್ಯಕ್ಷ ಡಾ.ರಮೇಶ್ ಬಾಬು ಮಾಧ್ಯಮಗಳ ಜೊತೆಗೆ ಮಾತನಾಡಿ, ಆಹಾರ ಪದಾರ್ಥಗಳ ಮೇಲೆ ಜಿ.ಎಸ್.ಟಿ. ವಿಧಿಸುತ್ತಿರುವುದು ಸಾಮಾನ್ಯ ಜನರಿಗೆ ತೊಂದರೆಯಾಗಲಿದೆ ಎಂದರು.
ಆಹಾರ ಪದಾರ್ಥಗಳ ಮೇಲೆ ಜಿ.ಎಸ್.ಟಿ. ಹಾಕಬಾರದು, ಇದನ್ನು ತಕ್ಷಣವೇ ರದ್ದುಗೊಳಿಸಬೇಕು. ಇದರ ವಿರುದ್ಧ ದೇಶವ್ಯಾಪಿ ಹೋರಾಟ ನಡೆಯುತ್ತಿದ್ದು, ಕೇಂದ್ರ ಸರ್ಕಾರ ತಕ್ಷಣವೇ ಜಿ.ಎಸ್.ಟಿ. ರದ್ದುಗೊಳಿಸಬೇಕು ಎಂದು ಒತ್ತಾಯಿಸಿದರು.
ಇದೇ ವೇಳೆ ಪ್ರತಿಭಟನಾಕಾರರು ಭಾರತ್ ಮಾತಾಕೀ ಜೈ ಘೋಷಣೆ ಕೂಗಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz