ಮಡಿಕೇರಿ: ವನ್ಯಜೀವಿಗಳ ಸಂಚಾರಕ್ಕೆ ಸಂಬಂಧಿಸಿದ ಅಹಿತಕರ ಘಟನೆಗಳನ್ನು ತಡೆಗಟ್ಟುವ ಸಲುವಾಗಿ ಕೊಡಗಿನಲ್ಲಿ ಪ್ರಾಯೋಗಿಕ ಆಧಾರದ ಮೇಲೆ ಹೊಸ ಯೋಜನೆ ಕೈಗೊಳ್ಳಲಾಗುತ್ತಿದೆ.
ಈ ಕ್ರಮಕ್ಕೆ ಖಾಸಗಿ ಕಂಪನಿಯೊಂದು ಹಣಕಾಸು ಒದಗಿಸಿದ್ದು, ಸಪೋರ್ಟ್ ಫಾರ್ ನೆಟ್ ವರ್ಕ್ ಮತ್ತು ಎಕ್ಸ್ ಟೆನ್ಶನ್ ಹೆಲ್ಪ್ ಏಜೆನ್ಸಿ (SNEHA) ಎಂಬ ಸರ್ಕಾರೇತರ ಸಂಸ್ಥೆಯಿಂದ ಸೈರನ್ ವ್ಯವಸ್ಥೆ ಸ್ಥಾಪಿಸಲಾಗಿದೆ.
ಕೊಡಗಿನ ವಿರಾಜಪೇಟೆಯಾದ್ಯಂತ ವನ್ಯಜೀವಿಗಳ ಚಲನೆಯ ಬಗ್ಗೆ ನಿವಾಸಿಗಳಿಗೆ ಎಚ್ಚರಿಕೆ ನೀಡಲು ಸೈರನ್ ವ್ಯವಸ್ಥೆಯನ್ನು SNEHA ಸಂಸ್ಥೆ ಪ್ರಾಯೋಗಿಕವಾಗಿ ಆರಂಭಿಸಿದೆ.
ಬಡಗ ಬನಂಗಾಲ ಮತ್ತು ಸುತ್ತಮುತ್ತಲಿನ ಪ್ರದೇಶಗಳ ಸಂಘರ್ಷ ವಲಯಗಳಲ್ಲಿ 12 ಅಂತಹ ಸೈರನ್‌ಗಳನ್ನು ಸ್ಥಾಪಿಸುವ ಪ್ರಕ್ರಿಯೆಯಲ್ಲಿ NGO ಕೆಲಸ ಮಾಡುತ್ತಿದೆ. ಈ ಯೋಜನೆ ಪ್ರಸ್ತುತ ಪ್ರಾಯೋಗಿಕ ಹಂತದಲ್ಲಿದ್ದರೂ, ಸ್ವಯಂಚಾಲಿತ ಎಚ್ಚರಿಕೆ ವ್ಯವಸ್ಥೆಗಳನ್ನು ಪರಿಚಯಿಸುವ ಮೂಲಕ ಅದನ್ನು ಮತ್ತಷ್ಟು ವಿಸ್ತರಿಸಲು SNEHA ಯೋಜಿಸಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW