ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ರಬ್ಬರ್ ಸ್ಟ್ಯಾಂಪ್ ಆಗಿದ್ದಾರೆ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಟೀಕಿಸಿದರು.
ಪ್ರಧಾನಿ ಮೊದಿ ರಾವಣ ಎಂಬ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ವಿಚಾರ ಕುರಿತು ಮಾತನಾಡಿದ ಕೆ.ಎಸ್ ಈಶ್ವರಪ್ಪ, ಹಿರಿಯರಾದ ಖರ್ಗೆ ಈ ರೀತಿ ಮಾತನಾಡಬಾರದು. ಪ್ರಧಾನಿ ಮೋದಿಯನ್ನ ಪ್ರಪಂಚವೇ ಮೆಚ್ಚಿದೆ. ಎಐಸಿಸಿ ಅಧ್ಯಕ್ಷ ಖರ್ಗೆ ರಬ್ಬರ್ ಸ್ಟಾಂಪ್ ಆಗಿದ್ದಾರೆ ಎಂದರು.
ಬಿಜೆಪಿ ರೌಡಿಗಳ ಪಕ್ಷ ಎಂಬ ಕಾಂಗ್ರೆಸ್ ಟೀಕೆಗೆ ತಿರುಗೇಟು ನೀಡಿದ ಕೆ.ಎಸ್ ಈಶ್ವರಪ್ಪ, ಕಾಂಗ್ರೆಸ್ ರೌಡಿಗಳ ಪಕ್ಷ, ಬಿಜೆಪಿ ಸುಸಂಸ್ಕೃತ ಪಕ್ಷವಾಗಿದೆ. ಕಾಂಗ್ರೆಸ್ ರೌಡಿಗಳ ಪಕ್ಷ ಎಂದು ತಿರಸ್ಕರಿಸಿದ್ದಾರೆ. ಡಿಕೆ ಶಿವಕುಮಾರ್ ಯಾವಾಗ ಜೈಲಿಗೆ ಹೋಗ್ತಾರೋ ಗೊತ್ತಿಲ್ಲ ಅಂತವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ಇದೆ. ನಲಪಾಡ್ ಜೈಲಿಗೆ ಹೋಗಿ ಬದವನು. ಅವನಿಗೆ ಯುವ ಕಾಂಗ್ರೆಸ್ ಅಧ್ಯಕ್ಷ ಪಟ್ಟ ನೀಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy