ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಉಸಿರಾಟದ ತೊಂದರೆ ಹಾಗೂ ಜ್ವರ ಕಾಣಿಸಿಕೊಂಡ ಕಾರಣ ಮಂಗಳವಾರ ಸಂಜೆ ಖರ್ಗೆ ಅವರನ್ನು ಬೆಂಗಳೂರಿನ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆಗೆ ಆಗಮಿಸುತ್ತಿದ್ದಂತೆ ಹಿರಿಯ ವೈದ್ಯರು, ಹಲವು ಪರೀಕ್ಷೆಗಳನ್ನು ನಡೆಸಿದರು. ಸದ್ಯ ವೈದ್ಯರು ಚಿಕಿತ್ಸೆ ನೀಡುತ್ತಿದ್ದು, ಖರ್ಗೆ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟನೆ:
ಹೃದಯ ನಿಯಂತ್ರಕ ಅಳವಡಿಸಲು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಪುತ್ರ, ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟಪಡಿಸಿದ್ದಾರೆ.
ಈ ಸಂಬಂಧ ಎಕ್ಸ್ ಪೋಸ್ಟ್ ಮಾಡಿರುವ ಅವರು, ಮಲ್ಲಿಕಾರ್ಜುನ ಖರ್ಗೆ ಅವರು ಹೃದಯದ ಅಸಹಜ ಲಯವನ್ನು ಸರಿಪಡಿಸುವ pacemaker ಅಳವಡಿಸಲು ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರ ಆರೋಗ್ಯ ಸ್ಥಿರವಾಗಿದ್ದು, ಚೇತರಿಕೆ ಕಾಣುತ್ತಿದ್ದಾರೆ. ಎಲ್ಲರ ಹಾರೈಕೆ ಹಾಗೂ ಕಾಳಜಿಗೆ ಧನ್ಯವಾದಗಳು ಎಂದಿದ್ದಾರೆ.
ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ
ಬೆಂಗಳೂರಿನ ಎಂ.ಎಸ್. ರಾಮಯ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಇದೇ ವೇಳೆ ಶೀಘ್ರ ಗುಣಮುಖರಾಗುವಂತೆ ಹಾರೈಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC