ಬೆಂಗಳೂರು: ವಿಮಾನದ ಇಂಜಿನ್ ಸ್ಥಗಿತಗೊಂಡ ಕಾರಣ ನವದೆಹಲಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ತುರ್ತು ಭೂಸ್ಪರ್ಶ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಏರ್ ಇಂಡಿಯಾ 2820 ವಿಮಾನವು ಸಂಜೆ 7 ಗಂಟೆಗೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆಗಿತ್ತು.ಬೆಂಗಳೂರಿನ ಸುತ್ತ ಸುತ್ತಿದ ನಂತರ ಒಂದು ಗಂಟೆಯ ನಂತರ ಹಿಂತಿರುಗಿತು ಎಂದು ಮೂಲಗಳು ತಿಳಿಸಿವೆ.
ಘಟನೆ ಬಗ್ಗೆ ಹೆಚ್ಚನ ತಾಂತ್ರಿಕ ವಿವರಗಳಿಲ್ಲ ಆದರೆ ವಿಮಾನವು ತುರ್ತು ಲ್ಯಾಂಡಿಂಗ್ ಮಾಡಿದೆ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ ಎಂದು ವರದಿಯಾಗಿದೆ.
ಯಾವುದೇ ಅಹಿತಕರ ಘಟನೆ ಸಂಭವಿಸಿಲ್ಲ ಮತ್ತು ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ. ನಂತರ ಪ್ರಯಾಣಿಕರಿಗೆ ಬದಲಿ ವ್ಯವಸ್ಥೆ ಕಲ್ಪಿಸಲಾಗಿದೆ. ಘಟನೆಯ ಬಗ್ಗೆ ತನಿಖೆ ಮುಂದುವರೆದಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx