ಬೆಂಗಳೂರು: ಗುಜರಾತಿನ ಅಹ್ಮದಾಬಾದ್ ನಗರದಲ್ಲಿ ಸಂಭವಿಸಿದ ವಿಮಾನ ಅಪಘಾತದಲ್ಲಿ ಪ್ರಯಾಣಿಕರು, ವಿಮಾನ ಸಿಬ್ಬಂದಿ ಸೇರಿದಂತೆ 240ಕ್ಕೂ ಅಧಿಕ ಮಂದಿ ಸಾವಿಗೀಡಾದ ಸುದ್ದಿ ಕೇಳಿ ಅತೀವ ದುಃಖವಾಯಿತು. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ. ಮೃತರ ಕುಟುಂಬಸ್ಥರಿಗೆ ಮತ್ತು ಬಂಧುಮಿತ್ರರಿಗೆ ಈ ನೋವನ್ನು ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.
ಈ ದುರ್ಘಟನೆಯಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ವಿದ್ಯಾರ್ಥಿಗಳು ಸೇರಿದಂತೆ ಎಲ್ಲ ಗಾಯಾಳುಗಳು ಆದಷ್ಟು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ ಎಂದು ಅವರು ಹೇಳಿದ್ದಾರೆ.
ತಮ್ಮವರನ್ನು ಕಳೆದುಕೊಂಡ ಜನರ ನೋವು–ಸಂಕಟ ಕಂಡು ಮನಸ್ಸು ಮಮ್ಮಲ ಮರುಗುತ್ತಿದೆ. ಈ ನೋವಿನ ಘಳಿಗೆಯಲ್ಲಿ ಇಡೀ ದೇಶ ಅವರ ಜೊತೆಗಿದೆ. ಮೃತರ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡುವ ಜೊತೆಗೆ ಉನ್ನತ ಮಟ್ಟದ ತನಿಖೆ ನಡೆಸಿ, ಘಟನೆಗೆ ಕಾರಣಗಳನ್ನು ಪತ್ತೆಮಾಡಿ, ಮತ್ತೆಂದೂ ಇಂತಹ ಅವಘಡಗಳು ಸಂಭವಿಸದಂತೆ ಅಗತ್ಯ ಕ್ರಮ ಕೈಗೊಳ್ಳುವ ಕೆಲಸವನ್ನು ಕೇಂದ್ರ ಸರ್ಕಾರ ಆದ್ಯತೆ ಮೇರೆಗೆ ಮಾಡಬೇಕು ಎಂದು ಸಿದ್ದರಾಮಯ್ಯ ಒತ್ತಾಯಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW