ಬೆಂಗಳೂರು: ಏರ್ ಶೋ ಮೂಲಕ ಮತ್ತೊಂದು ಕುಂಭ ಶುರುವಾದಂತಿದೆ. ಪ್ರಯಾಗ್ ರಾಜ್ ನ ಮಹಾ ಕುಂಭ ಮೇಳ ಸಂಸ್ಕೃತಿ ಬಗ್ಗೆ ತೋರಿಸಿದ್ರೆ, ಏರ್ ಶೋ ಭಾರತದ ರಕ್ಷಣಾ ಬಲಿಷ್ಠತೆಯನ್ನ ಜಗತ್ತಿಗೆ ಸಾರುತ್ತಿದೆ. ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದರು.
ಬೆಂಗಳೂರಿನಲ್ಲಿ ಏರ್ ಶೋಗೆ ಚಾಲನೆ ನೀಡಿ ಮಾತನಾಡಿದ ಅವರು, ಅಭಿವೃದ್ಧಿ, ಉತ್ಪಾದನೆಯ ಬಗ್ಗೆ ಭಾರತ ಕೇಂದ್ರೀಕೃತವಾಗಿದೆ. ಏರ್ ಶೋ ರಾಷ್ಟ್ರ–ರಾಷ್ಟ್ರಗಳ ಮಧ್ಯೆ ಸಂಬಂಧ –- ಬಾಂಧವ್ಯಗಳನ್ನ ಅಭಿವೃದ್ಧಿಗೊಳಿಸುತ್ತದೆ ಎಂದು ಅವರು ತಿಳಿಸಿದರು.
ದೇಶ-ವಿದೇಶಗಳ ವಾಯುಪಡೆಯ ಅಧಿಕಾರಿಗಳು ಇಲ್ಲಿದ್ದಾರೆ. ಭಾರತದ ಜೊತೆ ಈ ಅಧಿಕಾರಿಗಳ ಸಹಭಾಗಿತ್ವ ಮುಖ್ಯವಾಗಿದೆ. ಈ ಸಂಬಂಧ ವೃದ್ಧಿಯಾದ್ರೆ ಜಗತ್ತಿನಲ್ಲಿ ಬಲಿಷ್ಠರಾಗುತ್ತೇವೆ. ಡಿಜಿಟಲ್, ಸ್ಟಾರ್ಟ್ ಆಪ್, ಕೈಗಾರಿಕೋದ್ಯಮ, ನವೋದ್ಯಮದಲ್ಲಿ ಭಾರತ ಪ್ರಗತಿ ಹೊಂದುತ್ತಿದೆ ಎಂದು ಅವರು ತಿಳಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4