ಬೆಂಗಳೂರು: ವಾರಾಹಿ ವರ್ಲ್ಡ್ ಆಫ್ ಗೋಲ್ಡ್ ಶಾಪ್ ನಲ್ಲಿ 14 ಕೆ.ಜಿ. 600 ಗ್ರಾಂನಷ್ಟು ಚಿನ್ನಾಭರಣ ಖರೀದಿಸಿ ವಂಚಿಸಿದ ಆರೋಪದಲ್ಲಿ ಬಂಧನವಾಗಿದ್ದ ಐಶ್ವರ್ಯಗೌಡ ಹಾಗೂ ಆಕೆಯ ಪತಿ ಹರೀಶ್ ಗೌಡಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಚಂದ್ರಾ ಲೇಔಟ್ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದಿದ್ದರು. ಆದರೆ ಜಾಮೀನು ಮಂಜೂರಾದ ಹಿನ್ನೆಲೆ ಆರೋಪಿಗಳನ್ನು ಮಂಗಳವಾರ ರಾತ್ರಿಯೇ ಕಸ್ಟಡಿಯಿಂದ ರಿಲೀಸ್ ಮಾಡಲಾಗಿದೆ.
ಕಾಂಗ್ರೆಸ್ ಮಾಜಿ ಸಂಸದ ಡಿ.ಕೆ ಸುರೇಶ್ ತಂಗಿ ಎಂದು ಹೇಳಿಕೊಂಡು ಆರೋಪಿ ಐಶ್ವರ್ಯ 14.600 ಕೆಜಿಯಷ್ಟು ಚಿನ್ನಾಭರಣ ಖರೀದಿಸಿ ವಂಚನೆ ಮಾಡಿದ್ದಾರೆ ಎಂಬ ಆರೋಪ ಎದುರಿಸುತ್ತಿದ್ದಾರೆ.
ಪ್ರಕರಣದಲ್ಲಿ ಆರೋಪಿಗಳಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ 9ನೇ ಎಸಿಎಂಎಂ ಕೋರ್ಟ್ ಆದೇಶ ಹೊರಡಿಸಿತ್ತು. ಇದೀಗ ಹೈಕೋರ್ಟ್ ಜಾಮೀನು ನೀಡಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx