ಗುಬ್ಬಿ: ತಾಲೂಕಿನ ಸಿ.ಎಸ್.ಪುರ ಹೋಬಳಿಯ ವೆಂಕಟೇ ಗೌಡನಪಾಳ್ಯ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ಸ್ಪರ್ಶಿಸಿ ಗುಡಿಸಲು ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿರುವ ಘಟನೆ ಶನಿವಾರ ಮಧ್ಯಾಹ್ನ ಜರುಗಿದೆ
ವೆಂಕಟೇಗೌಡನ ಪಾಳ್ಯ ಲಲಿತಮ್ಮ ಎಂಬುವರಿಗೆ ಸೇರಿದ ವಾಸದ ಗುಡಿಸಲಾಗಿದ್ದು ಗುಡಿಸಿಲಿನಲ್ಲಿ ಸಂಗ್ರಹಿಸಲಾಗಿದ್ದ ದವಸ ಧಾನ್ಯಗಳು ಗೃಹ ಉಪಯೋಗಿ ವಸ್ತುಗಳು ಮತ್ತು ತೆಂಗು ಸೇರಿ ಸುಮಾರು ಎರಡು ಲಕ್ಷಕ್ಕೂ ಅಧಿಕ ವೆಚ್ಚದ ವಸ್ತುಗಳು ಸಂಪೂರ್ಣ ಸುಟ್ಟು ಕರಕಲಾಗಿದೆ.
ಸ್ಥಳೀಯರ ಸಹಾಯದಿಂದ ಬೆಂಕಿ ನಂದಿಸುವ ಕಾರ್ಯಕ್ಕೆ ಮುಂದಾಗಿದ್ದು ಯಾವುದೇ ಪ್ರಾಣಾಪಾಯ ಸಂಭವಿಸಿರುವುದಿಲ್ಲ .
ಘಟನಾ ಸ್ಥಳಕ್ಕೆ ಯಾವುದೇ ಇಲಾಖಾ ಅಧಿಕಾರಿಗಳು ಭೇಟಿ ನೀಡದೆ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ವೆಂಕಟೇಗೌಡನ ಪಾಳ್ಯ ನಿವಾಸಿಗಳು ಹಾಗೂ ಕುಟುಂಬಸ್ಥರು ಬೇಸರ ವ್ಯಕ್ತಪಡಿಸಿದ್ದಾರೆ.
ವರದಿ: ಡಿ.ಮಂಜುನಾಥ್, ಗುಬ್ಬಿ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB