ಕೊರಟಗೆರೆ: ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಟ್ಟಣದ ಮೂಡಲಪಣ್ಣೆಯ ಮಲ್ಲಮ್ಮ ಬಡಾವಣೆಯಲ್ಲಿ ಶುಕ್ರವಾರ ನಡೆದಿದೆ.
ನವೀನ್ ಕುಮಾರ್(27) ಆತ್ಮಹತ್ಯೆ ಮಾಡಿಕೊಂಡ ಯುವಕ. ಟೀ ಅಂಗಡಿ ವ್ಯಾಪಾರಿ ಆಗಿರುವ ನವೀನ್ ರಾತ್ರಿ 8 ಗಂಟೆಯ ವೇಳೆ ಮನೆಯಿಂದ, ಅವರ ಅಕ್ಕಳನ್ನು ಬಸ್ ನಿಲ್ದಾಣದಿಂದ ಕರೆದುಕೊಂಡು ಬರುತ್ತೇನೆಂದು ಹೇಳಿ ಹೋಗಿದ್ದು, ಅಂಗಡಿಯ ಮೇಲಿರುವ ರೂಮಿನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಕೊರಟಗೆರೆ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದ್ದು, ಪಿಎಸ್ ಐ ನಾಗರಾಜು. ಬಿ ಮುಖ್ಯಪೇದೆ ಪುರುಷೋತ್ತಮ್ ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.
ವರದಿ: ಮಂಜುಸ್ವಾಮಿ.ಎಂ.ಎನ್., ಕೊರಟಗೆರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz