ಬೀದರ್: ಮಹರಾಷ್ಟ್ರದ ಸಾರಿಗೆ ಬಸ್‌ನಲ್ಲಿ ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದ ಇಬ್ಬರು ಗಾಂಜಾಕೋರರನ್ನು ಬಂಧಿಸಿ ಸುಮಾರು 10 ಲಕ್ಷ ರೂ. ಮೌಲ್ಯದ ಗಾಂಜಾ ವಶಪಡಿಸಿಕೊಂಡ ಘಟನೆ ಬೀದರ್ ನಲ್ಲಿ ನಡೆದಿದೆ.
ಮಹಾರಾಷ್ಟ್ರ ಮೂಲದ ಮಧುಕರ್ ಹಾಗೂ ಅಮರ್ ಬಂಧಿತ ಆರೋಪಿಗಳು. ಆರೋಪಿಗಳು ತೆಲಂಗಾಣದಿಂದ ಬೀದರ್ ಮೂಲಕ ಮಹಾರಾಷ್ಟ್ರಕ್ಕೆ ಗಾಂಜಾ ಸಾಗಿಸುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿ ಪಡೆದಿದ್ದ ಪೊಲೀಸರು ಬೀದರ್ – ತೆಲಂಗಾಣ ಗಡಿಯಲ್ಲಿ ಬಸ್ ತಪಾಸಣೆ ಮಾಡಿದ್ದಾರೆ. ಈ ವೇಳೆ ತಲಾ 2 ಕೆಜಿಯ 5 ಪ್ಯಾಕೆಟ್ ಗಳಲ್ಲಿ ಗಾಂಜಾ ಪತ್ತೆಯಾಗಿದೆ.
ಅಕ್ರಮ ಸಾಗಾಟ ಮಾಡುತ್ತಿದ್ದ ಗಾಂಜಾಕೋರರನ್ನು ಬಂಧಿಸಿದ ಬೀದರ್ ಅಬಕಾರಿ ಪೊಲೀಸರು 10 ಲಕ್ಷ ರೂ. ಮೌಲ್ಯದ ಗಾಂಜಾವನ್ನು ಜಪ್ತಿ ಮಾಡಿದ್ದಾರೆ. ಈ ಕುರಿತು ಎನ್‌ಡಿಪಿಎಸ್ ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದು, ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA