ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನಲ್ಲಿ ಇತ್ತೀಚಿನ ದಿನಗಳಲ್ಲಿ ಗಾಂಜಾ ಮತ್ತು ಅಕ್ರಮ ಮದ್ಯ ದಂಧೆಗಳು ಎಗ್ಗಿಲ್ಲದೆ ಸಾಗುತ್ತಿದ್ದು ಎನ್ನುವ ಆರೋಪಗಳ ನಡುವೆಯೇ ವಾರ್ಡ್ ನಂ 19 ರ ಎ.ಕೆ. ಕಾಲೋನಿ ರಸ್ತೆಯಲ್ಲಿನ ಬ್ರಹ್ಮಕುಮಾರಿ ಈಶ್ವರಿ ವಿಶ್ವವಿದ್ಯಾಲಯ ಪಕ್ಕದಲ್ಲಿನ ಸುಂದರ್ ರಾಜ್ ಅವರ ಪತ್ನಿ ಮಂಜುಳ ಅವರು ಅಕ್ರಮ ಮದ್ಯ ಮಾರಾಟ ಮಾಡುತ್ತಿರುವ ವಿಷಯವನ್ನು ಸ್ಥಳೀಯ ಸಾರ್ವಜನಿಕರು ನಗರದ ಹಿರಿಯೂರು ಪೋಲಿಸ್ ಠಾಣೆಗೆ ಸುದ್ದಿಯನ್ನು ತಿಳಿಸಿದರು.
ಸಾರ್ವಜನಿಕರ ದೂರನ್ನು ದಾಖಲಿಸಿಕೊಂಡ ನಗರ ಪೋಲಿಸ್ ಉಪನಿರೀಕ್ಷಕರು ( ಸರ್ಕಲ್ ಇನ್ಸ್‌ಪೆಕ್ಟರ್ ) ವಿ.ಎಸ್.ಶಿವಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ವೇಳೆ ಮದ್ಯವನ್ನು ಅಕ್ರಮವಾಗಿ ದಾಸ್ತಾನು ಮಾಡಿಕೊಂಡು ಬಂದು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ.
ಪೊಲೀಸ್ ಉಪನಿರೀಕ್ಷಕರು ವಿ.ಎಸ್.ಶಿವಕುಮಾರ್ ನೇತೃತ್ವದ ತಂಡ ದಾಳಿ ನಡೆಸಿದ ವೇಳೆ 3.6 ಲೀಟರ್ ಮದ್ಯ ಪತ್ತೆಯಾಗಿದ್ದು, ಮದ್ಯವನ್ನು ವಶ ಪಡಿಸಿಕೊಂಡಿರುವ ಪೊಲೀಸರು ಆರೋಪಿಯಾದ ಸುಂದರ್ ರಾಜ್ ಪತ್ನಿ ಮಂಜುಳ ಅವರನ್ನು ಬಂಧಿಸಿದ್ದಾರೆ.
ಆರೋಪಿಗಳ ವಿರುದ್ಧ ಕಲಂ 32, 34. ಕೆ ಇ ಆಕ್ಟ್ ಪ್ರಕಾರ ಕೇಸ್ ದಾಖಲಿಸಿಕೊಳ್ಳಲಾಗಿದೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
ವರದಿ: ಮುರುಳಿಧರನ್ ಆರ್., ಹಿರಿಯೂರು(ಚಿತ್ರದುರ್ಗ)
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy